ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ಬಾಣಂತಿ ಮಹಿಳೆಯೊಬ್ಬರು ತನ್ನ 14 ದಿವಸದ ಹಸುಗೂಸನ್ನು ಬಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರಣ ಘಟನೆ ನಡೆದಿದೆ.
ವಿರಾಜಪೇಟೆ ತಾಲೂಕಿನ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಮಹಿಳೆ.
4 ವರ್ಷಗಳ ಹಿಂದೆ ದಿನೇಶ್-ಕಾವೇರಮ್ಮ ಮದುವೆಯಾದ್ದು, ಫೆ.12 ರಂದು ಪತಿ ದಿನೇಶ್ ತಮ್ಮ ಮನೆಯ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡಿದ್ದಾರೆ. ಕಾವೇರಮ್ಮ ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
14 ದಿವಸದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆ
