ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಕತ್ತರಿಗುಡ್ಡ ಅನ್ನಾರು ಪರಿಸರದಲ್ಲಿ ಗುರುವಾರ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಶುಕ್ರವಾರ ಮ್ರತಪಟ್ಟಿದೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿ ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡಿದ್ದರು. ಆದರೆ ಆನೆ ಸ್ಥಿತಿ ಗಂಭೀರವಾಗಿದ್ದರಿಂದ ಇಂದು ಅದು ಮೃತಪಟ್ಟಿದೆ ಎನ್ನಲಾಗಿದೆ.
ಕಾಡಾನೆ ಅರಣ್ಯದಲ್ಲಿ ಸಾವು
