ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.
ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು.
ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿ ಮಾಡಲಾಗಿದೆ.
ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕಾರ



































