ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿರುವ ಘಟನೆ ಕಬಕದಲ್ಲಿ ನಡೆದಿದೆ.
ಇದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ ಜನಾರ್ಧನ (40) ಮೃತ ದುರ್ದೈವಿ.
ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕಬಕದಿಂದ ವಿದ್ಯಾಪುರಕ್ಕೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಉಂಟಾಗಿದೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.
ಕಾರು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು

















