ಶಾಸಕ ವೇದವ್ಯಾಸ ಕಾಮತ್ ಸಹಿತ ಅವರ ಬೆಂಬಲಿಗರ ಮೇಲೆ ಪ್ರಕರಣ ದಾಖಲು

ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆದಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಬೆಂಬಲಿಗರೆನ್ನಲಾದ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪದವು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ರವಿವಾರ ರಾತ್ರಿ ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳನ್ನು ಸ್ವಾಗತಿಸಲು ಸ್ವಯಂಸೇವಕ ಎಂಬ ನೆಲೆಯಲ್ಲಿ ನಾನು ಆಶಾಲತಾ ಹಾಗೂ ದಯಾನಂದ ನಾಯ್ಕ ಎಂಬವರ ಜೊತೆ ನಿಂತಿದ್ದೆ. ಈ ವೇಳೆ ಆಗಮಿಸಿದ ಶಾಸಕ ವೇದವ್ಯಾಸ ಕಾಮತ್ ಅವರು ನಮ್ಮನ್ನು ಉದ್ದೇಶಿಸಿ ‘ದೇವಸ್ಥಾನಕ್ಕೆ ಕಲ್ಲು ಹೊಡೆಯುವ ನಿಮಗೆ ಇಲ್ಲೇನು ಕೆಲಸ?’ ಎಂದು ರಾಜಕೀಯ ಪ್ರೇರಿತವಾಗಿ ಪ್ರಶ್ನಿಸಿದ್ದಾರೆ. ಇದನ್ನು ಆಕ್ಷೇಪಿಸಿದ ನಾವು ಶಾಕರನ್ನು ಪ್ರಶ್ನಿಸಿದೆವು. ಈ ವೇಳೆ ಅಶ್ವಿತ್ ಕೊಟ್ಟಾರಿ, ಜಯಪ್ರಕಾಶ್ ಎಂಬವರು ಹಾಗೂ ಇತರ ಏಳೆಂಟು ಮಂದಿ ನನ್ನ ಮೇಲೆ ಹಲ್ಲೆ ನಡೆಸಿ, ಅಂಗಿಯನ್ನು ಹರಿದು ಹಾಕಿದ್ದಾರೆ. ಜಯಪ್ರಕಾಶ್ ಎಂಬಾತ ಜೀವ ಬೆದರಿಕೆ
ಕೂಡಾ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಹಲ್ಲೆ ನಡೆದ ಸಂದರ್ಭ ಸ್ಥಳದಲ್ಲಿದ್ದ ಶಾಸಕ ವೇದವ್ಯಾಸ ಕಾಮತ್, “ಆತನ ಕೈ ಕಾಲು ಮುರಿಯಿರಿ” ಹಲ್ಲೆ ಆರೋಪಿಗಳಿಗೆ ಬೆಂಬಲ ನೀಡಿದ್ದಾರೆ ಎಂದು ಯಶವಂತ ಪ್ರಭು ದೂರಿನಲ್ಲಿ ಉಲ್ಲೇಖಿಸಿ ಪೊಲೀಸ್ ದೂರು ನೀಡಿದ್ದು
ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



































































































Leave a Comment

Your email address will not be published. Required fields are marked *

error: Content is protected !!
Scroll to Top