ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬಾಜಿನಡ್ಕ ಆದಿನಾಗಬ್ರಹ್ಮ ಮೊಗೇರ್ಕಳ ದೈವಗಳ ನೇಮೋತ್ಸವ ಮತ್ತು ಸ್ವಾಮಿ ಕೊರಗಜ್ಕ ದೈವದ ಕೋಲದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮವು ಮಾ.8 ರಂದು ಸಂಜೆ ದೈವಸ್ಥಾನ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅರಂತೋಡು ತೊಡಿಕಾನ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಉದ್ಘಾಟಿಸಿದರು. ಮರ್ಕಂಜ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೀಶ್ವರ ಸಿದ್ಧಮಠದ ಶ್ರೀ ಶ್ರೀ ರಾಜೇಶ್ ನಾಥ್ ಜೀ ಆಶೀರ್ವಚನ ಮಾಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾಜಿ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ, ಬಾಜಿನಡ್ಕ ಆದಿ ನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನದ ಆಡಳಿತ ಮೊಕ್ತೇಸರ ಶಂಕರನಾರಾಯಣ ಕಟ್ಟಕೋಡಿ, ಸುಳ್ಯ ತಾಲೂಕು ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ, ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು, ಕಾಸರಗೋಡು ಪಚ್ಚಂಪಾರೆ ಬ್ರಹ್ಮಶ್ರೀ ಮೊಗೇರ ಮಹಕಾಳಿ ದೈವಸ್ಥಾನದ ದರ್ಮದರ್ಶಿ ಬಾಬು ಯು., ಸ್ಥಳದಾನಿ
ಶಂಕರ ಪೆರಾಜೆ, ಅರಂತೋಡು ಗ್ರಾ.ಪಂ ಸದಸ್ಯ ಗಂಗಾಧರ ಬನ ಉಪಸ್ಥಿತರಿದ್ದರು.
ರಂಜಿತಾ, ಭವ್ಯ ಪ್ರಾರ್ಥಿಸಿರು, ಭವ್ಯ ಬಾಜಿನಡ್ಕ ಸ್ವಾಗತಿಸಿ, ಚಿದಾನಂದ ಕಟ್ಟಕೋಡಿ ವಂದಿಸಿದರು. ಸವಿತಾ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.
ಬಾಜಿನಡ್ಕ : ಧಾರ್ಮಿಕ ಸಭಾ ಕಾರ್ಯಕ್ರಮ
