ಕೊಡಗು ಜಿಲ್ಲೆಯಲ್ಲಿ ಇಂದು ಭೂಮಿ ಕಂಪಿಸಿದ ಅನುಭವ ಆಗಿರುವ ಘಟನೆ ವರದಿಯಾಗಿದೆ. ಕೊಡಗು ಜಿಲ್ಲೆಯ ಮದೆನಾಡು ಜೋಡುಪಾಲ ಮತ್ತು ಮೊಣ್ಣಂಗೇರಿ ಭಾಗದಲ್ಲಿ ಬುಧವಾರ ಬೆಳಿಗ್ಗೆ 10.30 ಗಂಟೆ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಭೂಮಿ ದೊಡ್ಡದಾಗಿ ಗುಡುಗಿ ನಡುಗಿದ ಅನುಭವ ಉಂಟಾಗಿದ್ದು ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಜನರು ಹೊರಗೆ ಓಡಿ ಬಂದಿದ್ದಾರೆ.ಆದರೆ ರಿಕ್ಟರ್ ಮಾಪಕದಲ್ಲಿ ಭೂಕಂಪನದ ಬಗ್ಗೆ ದಾಖಲು ಆಗಿಲ್ಲ ಎಂದು ಹೇಳಲಾಗಿದೆ.
ಮದೆನಾಡು,ಜೋಡುಪಾಲದಲ್ಲಿ ಭೂಕಂಪ?
