ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಂದಕ್ಕೆ ಚಲಿಸಿ ಅಂಗಳದಲ್ಲಿ ನಿಂತಿದ್ದ ವ್ಯಕ್ತಿಗೆ ಗುದ್ದಿದ ಪರಿಣಾಮ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟ ಘಟನೆ ಇಂದು ನಡೆದಿದೆ.
ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿ ಗಾಯಗೊಂಡಿದ್ದರು.
ಮನೆಯಲ್ಲಿದ್ದ ಪತ್ನಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅರಣ್ಯ ಇಲಾಖೆಯಲ್ಲಿ ಪಂಜ, ಮಂಗಳೂರು ಹಾಗೂ ಸಂಪಾಜೆ ಸೇವೆ ಸಲ್ಲಿಸಿದ್ದು ಸಂಪಾಜೆಯಲ್ಲಿ ರೇಂಜರ್ ಆಗಿ ನಿವೃತ್ತರಾಗಿದ್ದರು