ವಿಷ ಸೇವಿಸಿ ಮಹಿಳೆಯೊಬ್ಬರು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ವರದಿಯಾಗಿದೆ.
ನೆಲ್ಲೂರು ಕೆಮ್ರಾಜೆ ಗ್ರಾಮದ ಕೊಡಪಾಲ ಲಿಂಗಪ್ಪ ನಾಯ್ಕ ರವರ ಪತ್ನಿ ರೇವತಿ ಎಂಬವರೇ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡ ಮಹಿಳೆ.
ವಿಷ ಸೇವಿಸಿದ ರೇವತಿಯವರನ್ನು ಮನೆಯವರು ಮತ್ತು ಸ್ಥಳೀಯರು ಸೇರಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಅಲ್ಲಿ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.
ಮೃತರು ಪತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
