ದ.ಕ ಜಿಲ್ಲೆಯಲ್ಲಿ ಕಾಡಿನಲ್ಲಿ ನಾಲ್ಕು ತಿಂಗಳ ಮಗುವೊಂದು ಪತ್ತೆಯಾದ ಕೆಲವೇ ದಿನಗಳಲ್ಲಿ ಕೂಡೋಳುಕೆರೆ -ಮುಂಡೋಟ್ಟು ರಸ್ತೆಯಲ್ಲಿ ಅಂದಾಜು 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದ್ದು ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ, 0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಇಂದು ತಿಳಿಸಿದ್ದಾರೆ.
ರಸ್ತೆಯಲ್ಲಿ ಮತ್ತೊಂದು ಹೆಣ್ಣು ಮಗು ಪತ್ತೆ!
