ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡೋಟ್ಟು ರಸ್ತೆಯಲ್ಲಿ ಮಾ.22 ರಂದು ಬೆಳಗ್ಗೆ ಒಂದುವರೇ ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಮಗುವಿನ ತಂದೆಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಇಬ್ಬರು ಕೂಡ ಸ್ವ ಇಚ್ಛೆಯಿಂದ ಮದುವೆಯಾಗುವುದಾಗಿ ಪೋಲಿಸರ ಮುಂದೆ ರಂಜಿತ್ ಗೌಡ ಒಪ್ಪಿದ್ದಾರೆ ಎನ್ನಲಾಗಿದೆ. ಆ ಮೂಲಕ ಪ್ರಕರಣ ಸುಖಾಂತ್ಯವಾಗಿದೆ.
ಅಪರಿಚಿತ ಹೆಣ್ಣು ಮಗು ಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಅನ್ನಪೂರ್ಣ ಮಾ.22 ರಂದು ದೂರು ನೀಡಿದ್ದು ಅದರಂದೆ ಅಪರಿಚಿತ ಮಗುವನ್ನು ಯಾರೋ ಬಿಟ್ಟು ಹೋದ ಬಗ್ಗೆ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆಗಿಳಿದ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರಾ ಮತ್ತು ತಂಡ ಮಗುವಿನ ತಂದೆ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದು ಎ.2 ರಂದು ರಾತ್ರಿ ಮಗುವಿನ ತಂದೆ ರಂಜಿತ್ ಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಉಜಿರೆಯಲ್ಲಿ ಬಾಡಿಗೆ ಮನೆ ಮಾಡಿ ಆಕೆಯನ್ನು ಬಿಟ್ಟಿದ್ದ ರಂಜಿತ್ ಗೌಡ ವಾರಕ್ಕೊಮ್ಮೆ ಬಂದು ನೋಡಿ ಹೋಗುತ್ತಿದ್ದು. ನಾರ್ಮಲ್ ಡೆಲಿವರಿ ಆಗಿದ್ದರಿಂದ ಆಸ್ಪತ್ರೆಗೆ ಹೋಗದೆ ಬಾಡಿಗೆ ರೂಂ ನಲ್ಲಿದ್ದರು. ಕುಟುಂಬದ ಭಯದಿಂದ ಅಥವಾ ಮದುವೆಯಾಗದ ಕಾರಣ ಮಗುವನ್ನು ಕಾಡಿಗೆ ಬಿಟ್ಟಿರುವ ಸಾಧ್ಯತೆ ಇದೆ. ಅದಲ್ಲದೆ ಎರಡು ಮನೆಗೆ ಪೊಲೀಸರು ಹೋಗುವ ತನಕ ಈ ವಿಚಾರ ಎರಡು ಮನೆಯ ಪೋಷಕರಿಗೆ ಗೊತ್ತಾಗಿಲ್ಲ ಎನ್ನಲಾಗಿದೆ. ಪ್ರಕರಣದ ಸತ್ಯಾತ್ಯತೆ ತಂದೆ-ತಾಯಿಯ ವಿಚಾರಣೆ ಬಳಿಕ ತಿಳಿದು ಬರಬೇಕಾಗಿದೆ.ಮಗುವನ್ನು ಸಾರ್ವಜನಿಕರು ನೋಡಿ ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಸಮ್ಮುಖದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯವರು ವಶಕ್ಕೆ ಪಡೆದು ಪುತ್ತೂರು ಆಶ್ರಮಕ್ಕೆ ಹಸ್ತಾಂತರಿಸಿದ್ದರು.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ನಿವಾಸಿ ತಿಮ್ಮಪ್ಪ ಗೌಡರ ಮಗ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಗ್ರಾಮದ ಕೊಲಂಗಾಜೆ ನಿವಾಸಿ ಧರ್ಣಪ್ಪ ಗೌಡರ ಮಗಳು ಮಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಸುಶ್ಮೀತಾ ಗೌಡ (22) ಮಗುವಿನ ತಂದೆ ತಾಯಿ ಎಂದು ಹೇಳಲಾಗುತ್ತಿದೆ.
ಬೆಳ್ತಂಗಡಿ : ಕಾಡಿನಲ್ಲಿ ಬಿಟ್ಟು ಹೋಗಿದ್ದ ಮಗುವಿನ ತಂದೆ ತಾಯಿ ಪತ್ತೆ!
