ಕಡಬ: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಜಾತ್ರೆಗೆ ಧ್ವಜಾರೋಹಣ ನೆರವೇರಿಸಲಾಯಿತು.
ಶುಕ್ರವಾರ ಬೆಳಗ್ಗೆ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ಸಂಪ್ರದಾಯದಂತೆ ಜಾತ್ರೆಗೆ ದ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಅಶ್ವಥ ಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಅನ್ನಸಂತರ್ಪಣೆ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಕ್ಷೇತ್ರದ ಅರ್ಚಕರು, ಪರಿಚಾರಕರು, ಕ್ಷೇತ್ರದ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು, ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರೆಂಜಿಲಾಡಿ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಜಾತ್ರೋತ್ಸವಕ್ಕೆ ಧ್ವಜಾರೋಹಣ, ನಾಳೆಯಿಂದ ಜಾತ್ರೋತ್ಸವ ಆರಂಭ
