ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ
ಕೊಲೆಗೈದಿದ್ದ ಆರೋಪಿಯನ್ನು ಪೊಲೀಸರ ಗುಂಡೇಟಿಗೆ ಬಲಿಯಾದ ಘಟನೆ ವರದಿಯಾಗಿದೆ.
ಪೊಲೀಸರು ಹೆಚ್ಚಿನ ವಿಚಾರಣೆಗೆ ಅರೋಪಿಯನ್ನು ಕರೆದೊಯ್ದಾಗ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಗುಂಡು ಹೊಡೆದ ಪರಿಣಾಮ ಮೃತಪಟ್ಟ ಘಟನೆ ಹುಬ್ಬಳಿ ನಗರದ ಹೊರ ವಲಯದಲ್ಲಿ ನಡೆದಿದೆ.
ಬಿಹಾರದ ಪಾಟ್ನಾದ ರಿತೇಶಕುಮಾರ (35) ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಆರೋಪಿ ವಶಕ್ಕೆ ಪಡೆದು ಆತನು ವಾಸಿಸುತ್ತಿದ್ದ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ಮಾಡುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಮಹಿಳಾ ಪಿಎಸ್ ಐ ಅನ್ನಪೂರ್ಣಾ ಅವರು ಮೊದಲು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ. ಆದರೂ ಸಹ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ. ನಂತರ ಮತ್ತೊಂದು ಗುಂಡು ಹಾರಿಸಿದಾಗ ಆತನ ಬೆನ್ನಿಗೆ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಚಿಕಿತ್ಸೆಗೆಂದು ಕೆಎಂಸಿಆರ್ ಐ ಆಸ್ಪತ್ರೆ ಕರೆತಂದಿದ್ದಾಗ ವೈದ್ಯರು ಮೃತ ಪಟ್ಟಿರುವುದಾಗಿ ಹೇಳಿದರು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು
ಪಾಟ್ನಾದ ನಿವಾಸಿಯಾದ ಆರೋಪಿ ರಿತೀಶ ಕುಮಾರ ಬೆಳಿಗ್ಗೆ 10.40ರ ಸುಮಾರು ವಿಜಯನಗರದ ವಾಸವಾಗಿದ್ದ ಬಾಲಕಿ ತಿಂಡಿ ತಿನಿಸುಗಳ ನೀಡುವುದಾಗಿ ಪುಸಲಾಯಿಸಿ ಕರೆದಿದ್ದಾನೆ. ನಂತರ ಅವಳನ್ನು ಎತ್ತಿ ಹಾಕಿಕೊಂಡು ಎದುರಿನ ಮನೆಯಲ್ಲಿರುವ ಶೆಡ್ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ. ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬಾಲಕಿ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಆತನನ್ನು ಹಿಡಿದು ಅಶೋಕ ನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿ ಕೊಲೆ ಮಾಡಿರುವ ಆರೋಪಿಯನ್ನು ಎನ್‌ಕೌಂಟರ್ ಮಾಡಬೇಕು. ಇಲ್ಲವೇ ನಮಗೆ ವಶಕ್ಕೆ ನೀಡಿ ಎಂದು ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಅಶೋಕ ನಗರದ ಪೊಲೀಸ್ ಠಾಣೆ ಎದುರು ಸುಮಾರು ಐದು ತಾಸು ವಿವಿಧ ಸಂಘಟನೆಯವರು ತೀವ್ರ ಪ್ರತಿಭಟನೆ ನಡೆಸಿದರು. ನಗರದ ರಾಣಿ ಚನ್ನಮ್ಮ ವೃತ್ತ, ಕೆಎಂಸಿಆರ್ ಐ ಶವಾಗಾರ, ಕೆಎಂಸಿಆರ್ ಐ ಮುಖ್ಯ ದ್ವಾರ ಬಳಿ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆ ಬಂದ್ ಮಾಡಿ, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಬಾಲಕಿಯ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ!
