ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವವು ಎ.22ರಿಂದ ಆರಂಭಗೊಂಡು ಎ.26ರ ತನಕ ನಡೆಯುವುದು. ಆ ಪ್ರಯುಕ್ತ ಗೊನೆ ಮುಹೂರ್ತ ಎ.14ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಸದಸ್ಯರು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ದಾಮೋದರ ಪಾತಿಕಲ್ಲು ಹಾಗೂ ಪದಾಧಿಕಾರಿಗಳು, ಪವಿತ್ರ ಪಾಣಿ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್ ಕೇನಾಜೆ ಮತ್ತು ಪದಾಧಿಕಾರಿಗಳು, ಕಚೇರಿಸಮಿತಿ ಅಧ್ಯಕ್ಷ ಪೂರ್ಣಚಂದ್ರ ಕಣೆಮರಡ್ಕ ಹಾಗೂ ಪದಾಧಿಕಾರಿಗಳು, ವಿವಿಧ ಸಮಿತಿಯವರು, ಊರವರು ಇದ್ದರು.
ಮಂಡೆಕೋಲು : ಮಹಾವಿಷ್ಣುಮೂರ್ತಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ
