ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ನಡೆದ ವಾಲಿಬಾಲ್ ತರಬೇತಿ ಶಿಬಿರ ಸಮಾರೋಪ ಮತ್ತು ತಾಲೂಕು ವಾಲಿಬಾಲ್ ಚಾಂಪಿಯನ್ ಶಿಪ್ ಉದ್ಘಾಟನೆ

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಇದರ ಆಶ್ರಯದಲ್ಲಿ ಯುವಜನ ಸಂಯುಕ್ತ ಮಂಡಳಿ (ರಿ) ಇದರ ಸಹಕಾರದಲ್ಲಿ ಎ.11ರಿಂದ ನಡೆದ ವಾಲಿಬಾಲ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಹೊನಲು ಬೆಳಕಿನ ಪುರುಷರ ತಾಲೂಕು ವಾಲಿಬಾಲ್ ಪಂದ್ಯಾಟ ಉದ್ಘಾಟನಾ ಕಾರ್ಯಕ್ರಮ ಸುಳ್ಯ ಯುವಜನ ಸಂಯುಕ್ತ ಮಂಡಳಿ ಮುಂಭಾಗದ ಜ್ಯುನಿಯರ್ ಕಾಲೇಜ್ ಕ್ರೀಡಾಂಗಣ ದಲ್ಲಿ ನಡೆಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಾಲಿಬಾಲ್ ಅಸೋಸಿಯೇಶನ್ (ರಿ) ಸುಳ್ಯ ಇದರ ಅಧ್ಯಕ್ಷರಾದ ದೊಡ್ಡಣ್ಣ ಬರೆಮೇಲು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ. ಲೀಲಾಧರ್ ಡಿ ವಿ ಪಂದ್ಯಕೂಟ ಉದ್ಘಾಟಿಸಿ ಮಾತನಾಡಿ ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಕಳೆದ 40 ವರ್ಷಗಳಿಂದ ಕ್ರಿಯಾಶೀಲವಾಗಿ ನಡೆದುಕೊಂಡು ಬಂದಿರುವುದು ಹೆಮ್ಮೆಯ ಸಂಗತಿ. ಪ್ರತಿ ವರ್ಷ ತರಬೇತಿ ಶಿಬಿರ ವನ್ನು ಆಯೋಜಿಸಿ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಿಸುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದು ಅಭಿಪ್ರಾಯ ಪಟ್ಟರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಶನ್ ಅಸೋಸಿಯೇಟ್ ಸೆಕ್ರೆಟರಿ ಎನ್ ಜಯಪ್ರಕಾಶ್ ರೈ, ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ಬಿ ಇದರ ಮುಖ್ಯಕಾರ್ಯನಿರ್ವಾಹನಾಧಿಕಾರಿ ಉಜ್ವಲ್ ಯು ಜೆ, ದ. ಕ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಸತೀಶ್ ಕುಮಾರ್, ಸೂಡ ಅಧ್ಯಕ್ಷ ಕೆ ಎಂ ಮುಸ್ತಫಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಡಾ. ಲೀಲಾಧರ್ ಡಿ ವಿ, ಡಾ. ಉಜ್ವಲ್ ಯು ಜೆ, ರಾಷ್ಟ್ರೀಯ ವಾಲಿಬಾಲ್ ತರಬೇತುದಾರ ರಾಜೇಶ್ ಪತ್ತಾರ್, ಸಹ ತರಬೇತುಧಾರರಾದ ಶ್ರೀಮತಿ ರಾಜೀವಿ ಲಾವಂತಡ್ಕ, ಜಯಪ್ರಕಾಶ್ ಕೆಡೆಕಲ್ಲು, ಸುದರ್ಶ ಕೆ ಎಸ್ ಸುಳ್ಯ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮುಖ್ಯ ಅತಿಥಿ ಗಳಾದ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಎನ್ ಎ ರಾಮಚಂದ್ರ, ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಮಾಧವ ಬಿ ಕೆ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಲಯ ಅರಣ್ಯಾಧಿಕಾರಿ ಮಂಜುನಾಥ್, ವಾಲಿಬಾಲ್ ಅಸೋಸಿಯೇಶನ್ ಗೌರವಾಧ್ಯಕ್ಷ ಸಂಶುದ್ದಿನ್ ಎಸ್, ಚೋಕ್ಕಾಡಿ ವಿದ್ಯಾ ಸಂಸ್ಥೆಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ, ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಲ ನಿರ್ದೇಶಕ ಚಂದ್ರ ಕೋಲ್ಚಾರ್, ಕೋಟೆಕ್ಕಲ್ ಆಯುರ್ವೇದ ಶಾಲೆಯ ಡಾ. ಪ್ರಶಾಂತ್ ಕುಮಾರ್, ವಾಲಿಬಾಲ್ ಅಸೋಸಿಯೇಶನ್ ಗೌರವ ಸಲಹೆಗಾರರಾದ ಹರೀಶ್ ರೈ ಉಬರಡ್ಕ, ಮೂಸಾ ಕುಂಜಿ ಪೈಂಬೆಚ್ಚಾಲ್, ನಗರ ಪಂಚಾಯತ್ ನಾ. ನಿ ಸದಸ್ಯ ರಾಜು ಪಂಡಿತ್, ವಾಲಿಬಾಲ್ ಅಸೋಸಿಯೇಶನ್ ನಿರ್ದೇಶಕರಾದ ಗೋಕುಲ್ ದಾಸ್ ಸುಳ್ಯ, ಶಾಫಿ ಕುತ್ತಮೊಟ್ಟೆ, ಚೇತನ್ ಕಜೆಗದ್ದೆ, ವಾಲಿಬಾಲ್ ಅಶೋಸಿಯೇಷನ್ ಕೋಶಾಧಿಕಾರಿ ಕೆ ಬಿ ಇಬ್ರಾಹಿಂ, ನಿರ್ದೇಶಕ ರಜ್ಜು ಬಯ್ಯ, ಇರ್ಫಾನ್ ಅಹಮ್ಮದ್ ಜನತಾ, ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಅಶ್ರಫ್ ಗುಂಡಿ, ನಿರ್ಣಾಯಕ ಮಂಡಳಿ ಸಂಚಾಲಕ ರಂಗನಾಥ ನಾಗಪಟ್ಟಣ, ಉಪಸ್ಥಿತರಿದ್ದರು. ನಗರ ಪಂಚಾಯತ್ ಸದಸ್ಯ, ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ವೆಂಕಪ್ಪ ಗೌಡ ತರಬೇತಿ ವಿದ್ಯಾರ್ಥಿ ಗಳಿಗೆ ಜೆರ್ಸಿ ಅನಾವರಣ ಮಾಡಿ ವಿತರಿಸಿದರು. ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕುಡೆಕಲ್ಲು ವಂದಿಸಿದರು. ಶಶಿಧರ್ ಎಂ ಜೆ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top