ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಸ್ವತಃ ತಾವೇ ಮಾಡಿರುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮಾರಾಟ ಮೇಳ ಮಂಗಳೂರು, ತಾಲ್ಲೂಕು ಪಂಚಾಯತ್ ಆವರಣದಲ್ಲಿ ನಡೆಯಿತು.
ಕೆ.ಇ ಜಯರಾಮ್ ಜಿಲ್ಲಾ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಸಹಾಯಕ ಆಯುಕ್ತರು ಹರ್ಷವರ್ಧನ್ ಎಸ್. ಜೆ ಸ್ವಸಹಾಯ ಸಂಘಗಳ ಉತ್ಪನ್ನಗಳ ಮಳಿಗೆಯನ್ನು ಉದ್ಘಾಟಿಸಿದರು. ಶ್ರೀ ಮಹೇಶ್ ಹೊಳ್ಳ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಮಂಗಳೂರು ಶ್ರೀ ಮಹೇಶ್ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಶ್ರೀಮತಿ ಕವಿತಾ ಸಾನಿಧ್ಯ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷೆ ಉಪಸ್ಥಿತರಿದ್ದರು.
ಈ ಸಮಾರಂಭದಲ್ಲಿ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ) ಇವರಿಗೆ ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿಯನ್ನು ಈ ಸಂದರ್ಭದಲ್ಲಿ ನೀಡಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯತ್ , ತಾಲ್ಲೂಕು ಪಂಚಾಯತ್ ಸಂಜೀವಿನಿ ಅಧಿಕಾರಿಗಳು , ಗ್ರಾಮ ಮಟ್ಟದ ಸಿಬ್ಬಂದಿಗಳು, ಸ್ವ ಸಹಾಯ ಸಂಘದ ಸದಸ್ಯರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಜೀವಿನಿ ಒಕ್ಕೂಟ ಸ್ವ-ಉತ್ಪನ್ನ ಪ್ರದರ್ಶನ ಮತ್ತು ಮಾರಾಟಸಂಪಾಜೆಯ ಮೋಹಿನಿ ವಿಶ್ವನಾಥ್ (ನಿಶಾ)ರಿಗೆ ಜಿಲ್ಲಾ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ
