ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ
ಪಹಲ್ಲಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಕನಿಷ್ಠ 27
ಮಂದಿ ಪ್ರವಾಸಿಗ ನಾಗರಿಕರು ಮೃತಪಟ್ಟು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ವಿಚಾರ ತಿಳಿಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ
ಅವರು ಈ ಹೀನ ಕೃತ್ಯದಲ್ಲಿ ಭಾಗಿಯಾದವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ಒಬ್ಬೊಬ್ಬರನ್ನೂ ಬೇಟೆಯಾಡುತ್ತೇವೆ ಎಂದು ಆಕ್ರೋಶದಿಂದ ನುಡಿದ್ದಾರೆ.
ಅವರು ಈ ದಾಳಿಗೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದ್ದಾರೆ. ಜೊತೆಗೆ, ಉಗ್ರರ ದಾಳಿಯಿಂದ ಮೃತಪಟ್ಟ ಕುಟುಂಬಗಳೊಂದಿಗೆ ನಾವಿದ್ದೇವೆ ಎಂದೂ ಸಾಂತ್ವನ ಹೇಳಿದ್ದಾರೆ.
ಕಾಶ್ಮೀರದ ಶ್ರೀನಗರಕ್ಕೆ ದೌಡಾಯಿಸಿದ ಕೇಂದ್ರ ಗೃಹಸಚಿವ
ಬೈಸರಣ್ ಕಣಿವೆಯಲ್ಲಿ ಭೀಕರ ಉಗ್ರ ದಾಳಿ ಕೃತ್ಯ ನಡೆದ ಮಾಹಿತಿ ತಿಳಿಯುತ್ತಿದ್ದಂತೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ಅಮಿತ್ ಶಾ ಬಳಿಕ ಕಾಶ್ಮೀರಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರು ಶಾ ಅವರಿಗೆ ದೂರವಾಣಿ ಕರೆ ಮಾಡಿ ಘಟನೆಯ ಮಾಹಿತಿ ಪಡೆದರಲ್ಲದೆ, ಕಾಶ್ಮೀರಕ್ಕೆ ಧಾವಿಸುವಂತೆ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಶಾ ಅವರು ದಿಲ್ಲಿಯಿಂದ ಶ್ರೀನಗರಕ್ಕೆ ದೌಡಾಯಿಸಿ ಎಲ್ಲಾ ಭದ್ರತಾ ಪಡೆಗಳೊಂದಿಗೆ ಭದ್ರತಾ ಪರಿಸ್ಥಿತಿಯ ಪರಿಶೀಲಿಸುವುದಾಗಿ ಅಮಿತ್ ಶಾ ಹೇಳಿದ್ದಾರೆ.
ಬೈಸರಣ್ ಕಣಿವೆಯಲ್ಲಿ ಭೀಕರ ಉಗ್ರ ದಾಳಿ ಕೃತ್ಯ ನಡೆದ ಮಾಹಿತಿ ತಿಳಿಯುತ್ತಿದ್ದಂತೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ಅಮಿತ್ ಶಾ ಬಳಿಕ ಕಾಶ್ಮೀರಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರು ಶಾ ಅವರಿಗೆ ದೂರವಾಣಿ ಕರೆ ಮಾಡಿ ಘಟನೆಯ ಮಾಹಿತಿ ಪಡೆದರಲ್ಲದೆ, ಕಾಶ್ಮೀರಕ್ಕೆ ಧಾವಿಸುವಂತೆ ಸೂಚಿಸಿದ್ದರು.
ಈ ಸೂಚನೆ ಬೆನ್ನಲ್ಲೇ ಶಾ ಅವರು ದಿಲ್ಲಿಯಿಂದ ಶ್ರೀನಗರಕ್ಕೆ ದೌಡಾಯಿಸಿ ಎಲ್ಲಾ ಭದ್ರತಾ ಪಡೆಗಳೊಂದಿಗೆ ಭದ್ರತಾ ಪರಿಸ್ಥಿತಿಯ ಪರಿಶೀಲಿಸುವುದಾಗಿ ಅಮಿತ್ ಶಾ ಹೇಳಿದ್ದರು.
ಪ್ರಮುಖರೊಂದಿಗೆ ಸಭೆ:
ಶ್ರೀನಗರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇರವಾಗಿ ರಾಜಭವನಕ್ಕೆ ತೆರಳಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ರಿಂದ ಘಟನೆಯ ಕುರಿತು ಅಮಿತ್ ಶಾ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಮತ್ತು ಗುಪ್ತಚರ ಬ್ಯೂರೋ ನಿರ್ದೇಶಕ ತಪನ್ ದೇಕಾ ಇತರರುಉಪಸ್ಥಿತರಿದ್ದರು.