ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಬತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುವ ಗೋವಿಂದ ಗೌಡರ ಪುತ್ರ ಪ್ರಥಮ್ (16) ಮೃತ ಬಾಲಕ.
ಮೇ 4 ಭಾನುವಾರದು ಮಧ್ಯಾಹ್ನದ ವೇಳೆ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಬಾಲಕನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬಾಲಕಮ ಮೃತದೇಹವನ್ನು ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಶವಪರೀಕ್ಷೆಗಾಗಿ ಸಾಗಿಸಲಾಗಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಆಟವಾಡುತ್ತಿದ್ದ ಮಗು ಹೃದಯಾಘಾತದಿಂದ ಸಾವು
