ಉಡುಪಿ: ‘ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ.ಅಪಾರ ಖ್ಯಾತಿ ಗಳಿಸಿದ್ದ ಉಡುಪಿ ಮೂಲದ ರಾಕೇಶ್ ಪೂಜಾರಿ ಸೋಮವಾರ (ಮೇ 12) ಮುಂಜಾನೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ ಅವರು ಉಡುಪಿಯ ಕಾರ್ಕಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ಸ್ನೇಹಿತರ ಜತೆ ಇದ್ದಾಗಲೇ ಅವರಿಗೆ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಕುಸಿದು ಬಿದ್ದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ತನ್ನ ವಿಭಿನ್ನ ಅಭಿನಯದಿಂದ ಕರುನಾಡಿನ ಮನಗೆದ್ದಿದ್ದರು. ‘ಕಾಮಿಡಿ ಕಿಲಾಡಿ’ ಶೋನಲ್ಲಿ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿತು.
ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ!
