ಸುಳ್ಯ, ಮೇ ೨೩: ರಾಜ್ಯ ಸರಕಾರದಿಂದ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಸುಳ್ಯದ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಚಾಕಲೇಟ್‌ನ ಲೋಕಾರ್ಪಣೆ ಸಮಾರಂಭ ನಡೆಯಿತು.
ಭಾರತ ಸರಕಾರದ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಇವತ್ತು ನಾವೆಲ್ಲರೂ ಕೃಷಿಯನ್ನು ಅಲಂಭಿತರಾಗಿರುವವರು. ಇವತ್ತಿಗೂ ಕೂಡ ದೇಶದಲ್ಲಿ ಅತೀ ಹೆಚ್ಚು ಉದ್ಯೋಗ ನೀಡುವ ಕ್ಷೇತ್ರ ಕೃಷಿ ಕ್ಷೇತ್ರ. ಸುಮಾರು ೫೦ ಕೋಟಿಗೂ ಹೆಚ್ಚು ಮಂದಿಗೆ ಕೃಷಿ ಕ್ಷೇತ್ರ ಉದ್ಯೋಗ ನೀಡುತ್ತಿದೆ. ಬಳಿಕದಲ್ಲಿ ಸೂಕ್ಷö್ಮ ಮತ್ತು ಸಣ್ಣ ಕೈಗಾರಿಕೆ ಕ್ಷೇತ್ರ ದೇಶದ ಸುಮಾರು ೨೪ ಕೋಟಿ ಮಂದಿಗೆ ಉದ್ಯೋಗ ನೀಡುತ್ತಿದೆ ಎಂದರು. ಇಂದು ಇಲ್ಲಿ ಜೇನು ಚಾಕಲೇಟ್ ಲೋಕಾರ್ಪಣೆ ಮಾಡಲಾಗಿದ್ದು, ಜೇನು ಸಾಕಾಣಿಕೆದಾರರಿಗೆ ಇದು ಪ್ರಯೋಜನವಾಗಲಿದ್ದು, ಗುಣಮಟ್ಟದ ಜೇನು ನೀಡುವ ಜೊತೆಗೆ ಗುಣಮಟ್ಟದ ಉತ್ಪನ್ನಕ್ಕೆ ಆದ್ಯತೆ ನೀಡಬೇಕು ಎಂದರು.
ಸುಳ್ಯ ಶಾಸ್ತಿç ವೃತ್ತ ಬಳಿಯ ಅಮೃತ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ, ಸಹಕಾರ ರತ್ನ ಡಾ.ಎಂಎನ್.ರಾಜೇAದ್ರ ಕುಮಾರ್ ಜೇನು ಚಾಕಲೇಟ್ ಲೋಕಾರ್ಪಣೆ ಮಾಡಿದರು. ಶಾಸಕಿ ಭಾಗೀರಥಿ ಮುರುಳ್ಯ ನಾಮಫಲಕ ಅನಾವರಣ ಮಾಡಿದರು. ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಂದ್ರ ಕೋಲ್ಚಾರ್ ಅಧ್ಯಕ್ಷತೆ ವಹಿಸಿದ್ದರು. ನ.ಪಂ.ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೋಟ್ಟು, ದ.ಕ.ಜೇನು ವ್ಯವಸಾಯಗಾರರ ಸಹಕಾರ ಸಂಘದ ಉಪಾಧ್ಯಕ್ಷ ರಾಜಾರಾಮ ಶೆಟ್ಟಿ ಹಾಗೂ ನಿರ್ದೇಶಕರು ಮತ್ತಿತರರು ಉಪಸ್ಥಿತರಿದ್ದರು. ಚಂದ್ರಕೋಲ್ಚಾರ್ ಸ್ವಾಗತಿಸಿ, ವ್ಯವಸ್ಥಾಪನಾ ನಿರ್ದೇಶಕ ತಿಮ್ಮಯ್ಯ ಪಿ. ವಂದಿಸಿದರು. ಲತಾಶ್ರೀ ಸುಪ್ರಿತ್ ಕಾರ್ಯಕ್ರಮ ನಿರೂಪಿಸಿದರು.
ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು,ಸುಳ್ಯ ನೂತನ ಕಟ್ಟಡ, ಸಂಸ್ಕರಣಾ ಘಟಕ ಹಾಗೂ ಜೇನು ಚಾಕಲೇಟ್ ಲೋಕಾರ್ಪಣೆ



































