ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ
ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 3ರ ಮಂಗಳವಾರ ವರದಿಯಾಗಿದೆ.
ತೆಂಕಬೆಳ್ಳೂರು ನಿವಾಸಿ ಅಭಿನ್ ರೈ(32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಬಂಧಿತ ಆರೋಪಿಗಳು.
ಪೊಲೀಸರು ಈ ಹಿಂದೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ : ಅಬ್ದುಲ್ ರಹಿಮಾನ್ ಹತ್ಯೆಯ ಮತ್ತಿಬ್ಬರು ಆರೋಪಿಗಳ ಬಂಧನ

















