ಆರ್.ಸಿ.ಬಿ‌ ಸಂಭ್ರಮಾಚರಣೆಯ ಕಾಲ್ತುಳಿತದಲ್ಲಿ ಉಪ್ಪಿನಂಗಡಿಯ ಯುವತಿ ಸಾವು

ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದು ಇವರಲ್ಲಿ ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ. 33 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರುನಲ್ಲಿ ಉದ್ಯಮಿಯಾಗಿರುವ ಉಪ್ಪಿನಂಗಡಿ ಇಳಂತಿಲ ಅಂಡೆತ್ತಡ್ಕ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ ಪುತ್ರಿ ಚಿನ್ಮಯಿ ಶೆಟ್ಟಿ(20ವ.) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ.18 ವರ್ಷದ ಕಾಯುವಿಕೆಯ ನಂತರ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬೆಂಗಳೂರಿನಲ್ಲಿ ಅಭಿಮಾನಿಗಳು ಬರಮಾಡಿಕೊಂಡಾಗ, ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top