ತೆಂಕು ತಿಟ್ಟಿನ ಯಕ್ಷಗಾನ ವೇಷ ಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವರ್ಷ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿ ಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.ಧರ್ಮಸ್ಥಳ, ಕರ್ನಾಟಕ, ಸಸಿಹಿತ್ತು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗ ಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ನಿರ್ವಹಿಸಿದ್ದರು.
ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖಪುಟಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ ಕಲಾವಿದರಾಗಿದ್ದರು. ಇವರ ಅಂತ್ಯ ಸಂಸ್ಕಾರ ಇಂದು ರುದ್ರಭೂಮಿಯಲ್ಲಿ ನೆರವೇರಲಿದೆ.
ಖ್ಯಾತ ಯಕ್ಷಗಾನ ಕಲಾವಿದ ನಿಧನ














































