ಕರ್ನಾಟದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳವಾರ ರಾತ್ರಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಔರಾದ್, ಬೀದರ್, ಬರಗೂರು, ಅಣ್ಣಿಗೆರೆ, ಹುಮ್ನಾಬಾದ್, ಚಿತ್ತಾಪುರ್, ಚಿಟಗುಪ್ಪ, ಸಿರಾ, ಬೆಂಗಳೂರು, ದಾವಣಗೆರೆ, ಮದ್ದೂರು, ಗುಬ್ಬಿ, ಜಗಳೂರು, ಹಿರಿಯೂರು, ಇಂಡಿ, ಭಾಲ್ಕಿ, ಸೇಡಂ, ಕಾರ್ಕಳ, ಮಂಗಳೂರು, ಬಂಟವಾಳ, ಕುಂದಾಪುರ, ಜಿಕೆವಿಕೆಯಲ್ಲಿ ಮಳೆಯಾಗಿದೆ. ಮುಂಗಾರು ಪೂರ್ವ
ದ.ಕ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ,ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

























































