ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡದಲ್ಲಿ ಸೋಮವಾರದಿಂದ ಜೂನ್ 29ರ ವರಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳಿದಂತೆ ಇತರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.
ಸೋಮವಾರ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಪ್ರತಿ ಗಂಟೆಗೆ 50 ಕಿ.ಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದು ಅಥವಾ 2 ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆ ಹಗುರದಿಂದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ

















