ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೂ.23ರಂದು ಬಿಜೆಪಿ ವತಿಯಿಂದ ಎಲ್ಲಾ ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಯುತ್ತಿದ್ದು ಮುರುಳ್ಯ ಗ್ರಾಮ ಪಂಚಾಯತಿ ಎದುರು ನಡೆದ ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಿ ರಾಜ್ಯ ಸರಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಹೇಳಿದರು.
9/11 ನಿವೇಶನಗಳ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಲಾಯಿತು.
ಆ ಅಕ್ರಮ ಸಕ್ರಮ ತಿರಸ್ಕರಿಸುವುದನ್ನು ಖಂಡಿಸಲಾಯಿತು.
ಬಡವರ ಅಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ ಒತ್ತಾಯಿಸಲಾಯಿತು.
ವೃದ್ಯಾಪ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಲಾಯಿತು.
ವಿದ್ಯುತ್ ದರ ಏರಿಕೆಯನ್ನು ಖಂಡಿಸಲಾಯಿತು.
ಪ್ರತಿಭಟನೆಯಲ್ಲಿ ಬಿಜಿಪಿ ಮುಖಂಡ ವಸಂತ ನಡುಬೈಲ್ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು.
ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮುರುಳ್ಯ ಗ್ರಾಮ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ

















