ಅಪರಿಚಿತ ಗಂಡಸಿನ ಮೃತದೇಹ ಉಜಿರೆ ಪೇಟೆಯಲ್ಲಿ ಪತ್ತೆಯಾಗಿದ್ದು. ಮೃತದೇಹದ ವಾರಿಸುದಾರರ ಪತ್ತೆಗೆ ಬೆಳ್ತಂಗಡಿ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಉಜಿರೆ ಪೇಟೆಯಲ್ಲಿ ಸುಮಾರು 45 ರಿಂದ 50 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಜೂ.24 ರಂದು ಬೆಳಿಗ್ಗೆ 8 ಗಂಟೆಗೆ ದೊರೆತಿದ್ದು. ಈ ಬಗ್ಗೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹವನ್ನು ಮಂಗಳೂರು ವೆನ್ಹಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಅಪರಿಚಿತ ಶವ ಪತ್ತೆ

















