ಗೆಳತಿಯನ್ನು ಗರ್ಭಿಣಿಯಾಗಿಸಿ ಮಗುವಿನ ಜನನಕ್ಕೆ ಕಾರಣವಾದ ವ್ಯಕ್ತಿಯನ್ನು ತಕ್ಷಣ ಬಂಧಿಸಲು ಎಸ್ಪಿಗೆ ಸೂಚನೆ

ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಕೃಷ್ಣ ಜೆ ರಾವ್ ತಲೆಮರೆಸಿಕೊಂಡಿದ್ದು ಎರಡು ದಿನಗಳಲ್ಲಿ ಆರೋಪಿಯನ್ನು ಬಂಧಿಸಲು ಶಾಸಕ ಅಶೋಕ್ ರೈ ಜಿಲ್ಲಾ ಎಸ್ಪಿ ಯವರಿಗೆ ಸೂಚನೆ ನೀಡಿದ್ದಾರೆ.
ಎಸ್ಪಿ ಅವರಿಗೆ ಕರೆ ಮಾಡಿದ ಶಾಸಕ ಅಶೋಕ್ ರೈ ಅವರು ಆರೋಪಿ ಎಲ್ಲೇ ಇದ್ದರೂ ಆತನನ್ನು ಬಂಧಿಸಬೇಕು. ಆರೋಪಿಯನ್ನು ಇಷ್ಟು ದಿನ ಬಂಧಿಸದೇ ಇರುವುದು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ತಂಡವನ್ನು ರಚನೆಮಾಡಿ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸಬೇಕು ಮತ್ತು ನೊಂದ ಯುವತಿಗೆ ನ್ಯಾಯವನ್ನೂ ಕೊಡಿಸುವ ಕೆಲಸ ಪೊಲೀಸ್ ಇಲಾಖೆ ಮಾಡಬೇಕು. ಇಲಾಖೆಗೆ ನನ್ನಿಂದ ಏನು ಸಹಾಯ ಬೇಕಿದ್ದರೆ ತಿಳಿಸಬೇಕು ಎಂದು ಶಾಸಕರು ಹೇಳಿದ್ದಾರೆ ಎನ್ನಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top