ಭಾರೀ ಕುತೂಹಲಕ್ಕೆ ಕಾರಣವಾದ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದನ್ನು ತೋರಿಸುವೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ದೂರು ನೀಡಿದ ವ್ಯಕ್ತಿ ಜುಲೈ 11 ರಂದು (ಇಂದು) ಸಂಜೆ 4:40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜೊತೆ ಹಾಜರಾಗಿದ್ದಾನೆ.
ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರಾಗಿ BNS 183 ಹೇಳಿಕೆ ನೀಡಿದ್ದಾನೆ.
ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದನ್ನು ತೋರಿಸುವೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹೇಳಿಕೆ ನೀಡಿದ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರು

















