ಅಗ್ನಿ ಅವಘಡ ಸಂಭವಿಸಿದ ಅರಂತೋಡು ಗ್ರಾಮ ಪಂಚಾಯತ್ ಘನ ತ್ಯಾಜ್ಯ ನಿರ್ವಹಣಾ  ಘಟಕ ಸ್ಥಳಕ್ಕೆ  ಸುಳ್ಯ ಕಾಂಗ್ರೆಸ್ ನಿಯೋಗ ಭೇಟಿ

ಆಕಸ್ಮಿಕ ಬೆಂಕಿಗೆ ಆಹುತಿ ಯಾದ ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕಕ್ಕೇ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ್, ಕಾರ್ಯದರ್ಶಿ ಪಿ ಎಸ್ ಗಂಗಾಧರ್, ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಕೆ ಎಂ ಮುಸ್ತಫಾ ರವರು ಜು 14 ರಂದು ಭೇಟಿ ನೀಡಿದರು.ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಘಟನೆ ಬಗ್ಗೆ ವಿವರಿಸಿ ಸುಮಾರು 60ಲಕ್ಷ ನಷ್ಟ ಸಂಭವಿಸಿದೆ ಎಂದರು.ಈ ಸಂರ್ಭದಲ್ಲಿ ಪಿ ಸಿ ಜಯರಾಮ ಮಾತನಾಡಿ ಘಟನೆ ಬಗ್ಗೆ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಅನುದಾನ ಬಿಡುಗಡೆ ಮಾಡಲು ಪ್ರಯತ್ನಿಸುದಾಗಿ ಭರವಸೆ ನೀಡಿದ್ದರು. ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವ್ಯವಸ್ತಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ,ಅರಂತೋಡುಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಪೂಜಾರಿ,ಶಶಿದರ ತೊಡಿಕಾನ,ಕೆಡಿಪಿ ಸದಸ್ಯ ಅಶ್ರಫ್ ಗುಂಡಿ,ಅರಂತೋಡು ಮೆಸ್ಕಾಂ ಸಲಹಾ ಸಮಿತಿ ಸದಸ್ಯ ತಾಜುದ್ದೀನ್ ಅರಂತೋಡು,ಅಮೀರ್ ಕುಕ್ಕುಂಬಳ,ಸೇರಿದಂತೆಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top