ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಇದರ ಸಹಕಾರ ದೊಂದಿಗೆ ಪರಿಸರ ಜಾಗೃತಿಯಾನ ಸರಣಿ ಕಾರ್ಯಕ್ರಮದ ಪ್ರಯುಕ್ತ ಔಷಧೀಯ ಸಸ್ಯಗಳನ್ನು ಗುರುತಿಸುವ ಸ್ಪರ್ಧೆಯನ್ನು ಸರಕಾರಿ ಪ್ರೌಢಶಾಲೆ ಅಜ್ಜಾವದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಸುಮಾರು ಮೂವತ್ತು ವಿಧದ ಔಷಧೀಯ ಸಸ್ಯಗಳನ್ನು ಗುರುತಿಸಲು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಈ ಸ್ಪರ್ಧೆಯ ಬಹುಮಾನ ಪ್ರಾಯೋಜಕತ್ವವನ್ನು ಸುಳ್ಯ ತಾಲೂಕು ಸಾಹಿತ್ಯ ಪರಿಷತ್ತು ಘಟಕ ವಹಿಸಿಕೊಂಡಿದೆ. ಪ್ರಕೃತಿಯಲ್ಲಿರುವ ಹಲವಾರು ಔಷಧೀಯ ಸಸ್ಯಗಳ ಬಗ್ಗೆ ಇಂದಿನ ಯುವಜನತೆಗೆ ಅರಿವಿಲ್ಲದಿರುವ ಕಾರಣ ಅರಿವು ಮೂಡಿಸಲು ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.ಮಕ್ಕಳು ಈ ಕಾರ್ಯಕ್ರಮದಲ್ಲಿ ಸ್ಫೂರ್ತಿಯಿಂದ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ್ಯೋಪಾಧ್ಯಾಯ ರಾದ ಗೋಪಿನಾಥ್ ಮೆತ್ತಡ್ಕ, ಮಂದಾರ ಇಕೋ ಕ್ಲಬ್ ಸಂಚಾಲಕರಾದ ಚಂದ್ರಶೇಖರ ಭಟ್ , ಎಸ್. ಡಿ.ಎಂ.ಸಿ ಅಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ, ಪ್ರತಾಪ ಯುವಕ ಮಂಡಲ ಅಧ್ಯಕ್ಷ ಗುರುರಾಜ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯೆ ಶಶ್ಮಿ ಭಟ್ ಚೈತ್ರ ಯುವತಿ ಮಂಡಲ ಉಪಾಧ್ಯಕ್ಷೆ ಮಾಲತಿ, ಹಾಗೂ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು. ಔಷಧೀಯ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಹಿರಿಯ ಶಿಕ್ಷಕಿ ವಿದ್ಯಾಶಂಕರಿ .ಯಸ್ ತಿಳಿಸಿದರು .
ಅಜ್ಜಾವರ : ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆ

















