ಮೂಡಬಿದಿರೆ ಇಲ್ಲಿನ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಈ ಕಾಲದಲ್ಲಿ ಯಾರನ್ನೂ ನಂಬುವ ಹಾಗಿಲ್ಲ.ಮೂಡಬಿದಿರೆ ಇಲ್ಲಿನ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಬೆಂಗಳೂರು ಮೂಲದ ವಿದ್ಯಾರ್ಥಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದು, ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿ ಸೇರಿದಂತೆ ಆಕೆಯ ಪೋಷಕರು ಈ ಕುರಿತಂತೆ ಮಹಿಳಾ ಆಯೋಗಕ್ಕೆ ನೀಡಿದ ದೂರಿನ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಿ ಉಪನ್ಯಾಸಕರಾದ ನರೇಂದ್ರ
ಸಂದೀಪ್ ಮತ್ತು ಸ್ನೇಹಿತ ಅನೂಪ್ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಘಟನೆಯ ಹಿನ್ನೆಲೆ: ವಿದ್ಯಾರ್ಥಿನಿ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ದಿನಗಳಲ್ಲಿ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ಪರಿಚಯವಾಗಿದ್ದು, ಈ ಸ್ನೇಹ ಸಲುಗೆಯು ವಿದ್ಯಾರ್ಥಿನಿ ಬೆಂಗಳೂರಿಗೆ ಹೋದ ನಂತರವೂ ಮುಂದುವರಿದಿದೆ. ಇದೇ ನೆಪದಲ್ಲಿ ನರೇಂದ್ರ ಬೆಂಗಳೂರಿನಲ್ಲಿರುವ ಗೆಳೆಯನ ರೂಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದ್ದು, ನಂತರದಲ್ಲಿ ಈ ವಿಚಾರವನ್ನ ತಿಳಿದ ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಗೆ ಕೂಡ ಹುಡುಗಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಮತ್ತೆ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ ಈತನ ಇನ್ನೋರ್ವ ಸ್ನೇಹಿತ ಅನೂಪ್ ಕೂಡ ತನ್ನಲ್ಲಿ ಸಿಸಿಟಿವಿ ದೃಶ್ಯವಿದೆ ಎಂದು ಹೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೂಡುಬಿದಿರೆಯಲ್ಲಿ ಓದು ಮುಗಿಸಿದ್ದ ವಿದ್ಯಾರ್ಥಿನಿ, ಬೆಂಗಳೂರಿನಲ್ಲಿ ಓದು ಮುಂದುವರಿಸಿದ್ದಳು. ಮೊದಲು ಈಕೆ ಆರೋಪಿಗಳ ಬೆದರಿಕೆಗೆ ಹೆದರಿ ಸುಮ್ಮನಿದ್ದು, ನಂತರದಲ್ಲಿ ಇವರ ಕಿರುಕುಳ ತಾಳಲಾರದೆ ಪೋಷಕರಿಗೆ ತಿಳಿಸಿದ್ದು, ಪೋಷಕರು ಮಹಿಳಾ ಆಯೋಗದ ಮುಖಾಂತರ ದೂರು ನೀಡಿರುತ್ತಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top