ಕಾಡಾನೆ ತಿವಿದು ವ್ಯಕ್ತಿ ಸಾವು

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು. 17 ರಂದು ನಡೆದಿದೆ.
ಬೆಳ್ಳಂಬೆಳ್ಳಗೆ ಎರಡು ಆನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದಿದ್ದರು. ಆನೆ ಓಡಿಸುವ ಸಂದರ್ಭದಲ್ಲಿ ಆನೆಯು ತಿರುಗಿ ಬಂದು ಬಾಲಕೃಷ್ಣ ಶೆಟ್ಟಿ ಎಂಬವರಿಗೆ ಸೊಂಡಿಲಿನಿಂದ ತಿವಿದು, ಗಂಭೀರ ಗಾಯಗೊಳಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top