ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿ ಎಸ್ ಐ ಖೀರಪ್ಪ (55) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ತನಿಖಾ ಪಿ.ಎಸ್.ಐ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಅವರು, ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ದಿನಾಂಕ 20.07.2025 ರಂದು ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಆ ಬಳಿಕ ಬಂಟ್ವಾಳದಲ್ಲಿ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖೀರಪ್ಪ ಉತ್ತರ ಕನ್ನಡದ ಕಾರವಾರ ಮೂಲದವರಾಗಿದ್ದು, ದಿನಾಂಕ 19.07.2025 ರಂದು ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿ ಕರ್ತವ್ಯಕ್ಕಾಗಿ ಠಾಣೆಯಿಂದ ದೂರವಾಣಿ ಕರೆ ಮಾಡಿದಾಗ ಸ್ಪಂದಿಸದ ಹಿನ್ನೆಲೆಯಲ್ಲಿ, ಠಾಣಾ ಸಿಬ್ಬಂದಿ ಮನೆಗೆ ತೆರಳಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತ ಕೀರಪ್ಪ ಅವರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.
ಬಂಟ್ವಾಳ .ಪಿ ಎಸ್.ಐ ಆತ್ಮಹತ್ಯೆ

















