ಕೊಡಗಿನ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು . ಸಾವನ್ನಪ್ಪಿದವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಮೂಲದವರಾಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ಮಂದಿ ಸಾವು

















