ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಭಾನುವಾರ ಕಲ್ಲುಗುಂಡಿಯಿಂದ ವರದಿಯಾಗಿದೆ.
ಸಂಪಾಜೆ ಬೈಲು ನಿವಾಸಿ ಕೊ. ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಮಾರ್ ಚೆದ್ಮಾರ್‌ರವರ ತಾಯಿ ಕಮಲ ಚಿದ್ಕಾರ್ (67 ವರ್ಷ) ರವರು ಕಲ್ಲುಗುಂಡಿಯ ಅಂಚೆ ಕಚೇರಿಯ ಬಳಿ ಬಸ್ ತಂಗುದಾಣದಿಂದ ಸಂಪಾಜೆ ಕಡೆ ಹೋಗುವ ಬಸ್ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ, ಅದೇ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಕೇರಳ ಮೂಲದ ಬೈಕ್ ನಿಯಂತ್ರಣ ತಪ್ಪಿ ಅವರಿಗೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ ಮಹಿಳೆಗೆ ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ
ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು

















