ಧರ್ಮಸ್ಥಳ ಗ್ರಾಮದ ಬೊಳಿಯರ್ ಬಸ್ ನಿಲ್ದಾಣದ ಬಳಿ ಆನೆ ಪ್ರತ್ಯಕ್ಷವಾಗಿದ್ದು ಬಸ್ ಗಾಗಿ ಕಾಯುತ್ತಿದ್ದ ಮಕ್ಕಳು ಅಲ್ಲೇ ಇದ್ದ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ.
ರಸ್ತೆ ಬದಿಯ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಗಾಗಿ ಕಾಯುತ್ತಿದ್ದಾಗ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ.
ಬಳಿಕ ಆನೆ ಕಾಡಿನತ್ತ ಹೋಗಿದ್ದು ಸ್ವಲ್ಪದರಲ್ಲೇ ಅಪಾಯ ತಪ್ಪಿದೆ. ಕಳೆದ ಎರಡು ವಾರಗಳ ಹಿಂದೆಯಷ್ಟೇ ಕೊಕ್ಕಡ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕಾಡಾನೆ ದಾಳಿ ಮಾಡಿ ಕೊಂದಿರುವ ನಡುವೆಯೇ ಈ ಘಟನೆ ನಡೆದಿರೋದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಬಸ್ ನಿಲ್ದಾಣದಲ್ಲಿ ಕಾಡಾನೆ ಪ್ರತ್ಯಕ್ಷ,ಓಡಿ ತಪ್ಪಿಸಿಕೊಂಡ ಮಕ್ಕಳು

















