ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕಡೇಶಿವಾಲಯ ಗ್ರಾಮದ ಕೊರತಿಗುರಿಯ ಯುವಕನೊರ್ವ ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆಯ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಪತ್ತೆಯಾಗಿದೆ.
ಕಡೇಶಿವಾಲಯ ಗ್ರಾಮದ ಜಗದೀಶ್ ಆಚಾರ್ಯ ಅವರ ಪುತ್ರ ಹೇಮಂತ್ ಆಚಾರ್ಯ (28) ಜುಲೈ 28 ರಂದು ಫರಂಗಿಪೇಟೆಗೆ ಕೆಲಸಕ್ಕೆಂದು ತೆರಳಿದ ನಂತರ ನಾಪತ್ತೆಯಾಗಿದ್ದರು. ಆತನಿಗಾಗಿ ಹುಡುಕಾಟ ನಡೆಸಿದ ಕುಟುಂಬಸ್ಥರು ಜುಲೈ 29 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ನಾಪತ್ತೆಯಾದ ಯುವಕನ ದ್ವಿಚಕ್ರ ವಾಹನ,ಮೊಬೈಲ್ ಪೋನ್ ಪತ್ತೆ

















