ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿ ಸುಳ್ಯ ತಾಲ್ಲೂಕು ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರ ಅರಂಬೂರು ಇದರ ಸಹಯೋಗದೊಂದಿಗ ಪುರೋಹಿತ ಅಭಿರಾಮ್ ಭಟ್ ಸರಳಿಕುಂಜರ ನೇತೃತ್ವದಲ್ಲಿ ಅರಂಬೂರು ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಈ ದಿನ ನಡೆಯಿತು
ಈ ದಿನ ಬೆಳಗ್ಗೆ 10:30ರ ಶುಭ ಮುಹೂರ್ತದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಯೋಜನಾಧಿಕಾರಿಗಳಾದ ಮಾಧವ ಗೌಡರವರು ದೀಪ ಬೆಳಗಿಸುವುದರ ಮೂಲಕ 15ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಚಾಲನೆಯನ್ನ ನೀಡಿದರು ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕಿನ ಅಧ್ಯಕ್ಷರಾದ ಸೋಮಶೇಖರ್ ಪೈಕ ಸುಳ್ಯ ವಲಯದ ಮೇಲ್ವಿಚಾರಕರಾದ ದಿನೇಶ್ ಶ್ರೀಮೂಕಾಂಬಿಕ ಭಜನಾ ಮಂದಿರದ ಗೌರವಾಧ್ಯಕ್ಷರಾದ ಶ್ರೀ ಪತಿ ಭಟ್ ಮಜಿಗುಂಡಿ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಸತೀಶ್ T N ಭಜನಾ ಮಂದಿರದ ಅಧ್ಯಕ್ಷರಾದ ಪರಮೇಶ್ವರ್ ಅರಂಬೂರು ಒಕ್ಕೂಟದ ಅಧ್ಯಕ್ಷರಾದ ಚಂದ್ರಶೇಖರ ಪರಿವಾರಕಾನ ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಹಾಗೂ ಎರಡು ಒಕ್ಕೂಟದ ಪದಾಧಿಕಾರಿಗಳು ಪೂಜಾ ಸಮಿತಿಯ ಅಧ್ಯಕ್ಷರಾದ ಉಷಾಮಜಿಗುಂಡಿ ಹಾಗೂ ಪದಾಧಿಕಾರಿಗಳು ಗ್ರಾಮ ಪಂಚಾಯತ್ ಸದಸ್ಯರುಗಳು ಪರಿವಾರಕಾನ ಒಕ್ಕೂಟದ ಸೇವಾ ಪ್ರತಿನಿಧಿ ಸುರೇಶ್ ಅರಂಬೂರು ಒಕ್ಕೂಟದ ಸೇವಾ ಪ್ರತಿನಿಧಿ ವಿಜಯಶ್ರೀ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಊರಿನ ಗಣ್ಯರು ಯೋಜನೆಯ ಹಿತೈಷಿಗಳು ಭಾಗವಹಿಸಿದ್ದರು ಮಧ್ಯಾಹ್ನ 12:30ಕ್ಕೆ ಮಹಾಪೂಜೆ ನಡೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು ಈ ಒಂದು ಕಾರ್ಯಕ್ರಮದಲ್ಲಿ ಊರಿನ ಸುಮಾರು 750 ಮಿಕ್ಕಿ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು
ಅರಂಬೂರು : 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ














































