ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರು ರಾಜ್ಯದ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಆ.21ರಂದು ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಹಾರ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿದರು. ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ ವಿ. ಸೋಮಣ್ಣ, ಶ್ರೀ ಎಚ್ ಡಿ ಕುಮಾರಸ್ವಾಮಿ ಮತ್ತು ಕರ್ನಾಟಕದ ಸಹೋದ್ಯೋಗಿ ಸಂಸದರೊಂದಿಗೆ ನಮ್ಮ ರಾಜ್ಯದ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಮಾನ್ಯ ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ
ಮಂಗಳೂರು ಮತ್ತು ಕರ್ನಾಟಕದ ಅಡಿಕೆ ಬೆಳೆಯುವ ಭಾಗಗಳಲ್ಲಿ ಹಳದಿ ಮತ್ತು ಎಲೆ ರೋಗದ ತೀವ್ರ ಪರಿಣಾಮದ ಕುರಿತು ಸಚಿವರ ಗಮನ ಸೆಳೆಯಲಾಯಿತು..
ಈ ಸಮಸ್ಯೆ ಕುರಿತು ನಾವು ಮೊದಲಿನಿಂದಲೂ ಹೋರಾಡುತ್ತಿದ್ದು, ಮತ್ತೊಮ್ಮೆ ಇದರ ಗಂಭೀರತೆಯನ್ನು ಸಚಿವರಿಗೆ ಮನವರಿಕೆ ಮಾಡಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಶಯ ‘ಆತ್ಮನಿರ್ಭರ ಭಾರತ’ದ ಕನಸಿಗೆ ನಮ್ಮ ರೈತರೂ ಕೂಡಾ ಕೊಡುಗೆ ನೀಡಲು, ಅವರ ಜೀವನೋಪಾಯವನ್ನು ರಕ್ಷಿಸಲು ಒಂದು-ಬಾರಿ ಪರಿಹಾರ ಪ್ಯಾಕೇಜ್ ಮತ್ತು ದೀರ್ಘಕಾಲೀನ ಪರಿಹಾರಗಳನ್ನು ಒದಗಿಸುವಂತೆ ಮನವಿ ಮಾಡಿದರು.
ಅಡಿಕೆ ಎಲೆ ಹಳದಿ ಮತ್ತು ಎಲೆಚುಕ್ಕಿ ರೋಗದಿಂದ ಆರ್ಥಿಕ ಸಂಕಷ್ಟಕೊಳಗಾದ ರೈತರಿಗೆ ಪರಿಹಾರ ಪ್ಯಾಕೇಜ್ ನೀಡಲು ಸಂಸದ ಚೌಟ ಒತ್ತಾಯ




















