ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ದಿನದ ಶಿಬಿರ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿ, ಸ್ಪಂದನ ಗೆಳೆಯರ ಬಳಗ ರಿ. ಅಡ್ತಲೆ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವರ ಆಶ್ರಯದಲ್ಲಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು. ಸುಶ್ಮಿತಾ ಎಂ.ಎ ಇವರಿಗೆ ಹುಟ್ಟೂರ ಅಭಿನಂದನಾ ಸಮಾರಂಭ ಅಡ್ತಲೆ ಶಾಲೆಯಲ್ಲಿ ಸೆ.5ರಂದು ನಡೆಯಲಿದೆ.
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಕಮಿಟಿ ‘ಬಿ’ ಇದರ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಣ್ಣಯ್ಯ ಕೆ ಇವರು ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೇಶವ ಅಡ್ತಲೆ, ಸದಸ್ಯರಾದ ಶ್ರೀಮತಿ ಸುಜಯಾ ಲೋಹಿತ್ ಮೇಲಡ್ತಲೆ,ಗೌರವ ಉಪಸ್ಥಿತರಾಗಿ ಅಡ್ತಲೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀ ಮುಕುಂದ ಡಿ. , ಅಡ್ತಲೆ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಹಿತ್ ಮೇಲಡ್ತಲೆ, ಸ್ಪಂದನ ಗೆಳೆಯರ ಬಳಗ ರಿ. ಅಡ್ತಲೆ ಇದರ ಅಧ್ಯಕ್ಷರಾದ ಶ್ರೀ ವಿನಯ್ ಬೆದ್ರುಪಣೆ,ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಹರಿಪ್ರಸಾದ್ ಅಡ್ತಲೆ,ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ಶ್ರೀ ಸುಜಿತ್ ಎಂ.ಎಸ್. ಇವರುಗಳು ಉಪಸ್ಥಿತರಿರುವರು.



































