ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.೩ರಂದು ಜಾಮೀನು ಮಂಜೂರು ಮಾಡಿತ್ತು. ಬಳಿಕ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.೪ರಂದು ಮುಗಿಸಿ ಆರೋಪಿಯನ್ನು ಮಂಗಳೂರು ಜೈಲಿನಿಂದ ಬಿಡುಗಡೆಗೊಳಿಸಿ ಕರೆತರಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.
ಮಗುವಿಗೆ ಜನ್ಮ ನೀಡಿದ ಪ್ರಕರಣ : ಆರೋಪಿ ಶ್ರೀಕೃಷ್ಣ ಜೆ.ರಾವ್ ಗೆ ಜಾಮೀನು ಮಂಜೂರು

















