ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಗೊಂಡಿದ್ದಾರೆ.
ಪ್ರೌಢಶಾಲಾ ವಿಭಾಗದಿಂದ ಎಣ್ಣೂರು ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಮೋಹನ್, ಪ್ರಾಥಮಿಕ ಶಾಲಾ ವಿಭಾಗದಿಂದ ದೇವಚಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ್ ಗೌಡ ಕೆರೆಮೂಲೆ, ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಕೊಲ್ಲಮೊಗ್ರ ಗ್ರಾಮದ ಬೆಂಡೋಡಿ ಶಾಲೆಯ ಮುಖ್ಯ ಶಿಕ್ಷಕಿ ಲಲಿತ ಕುಮಾರಿ ಆಯ್ಕೆಯಾಗಿದ್ದಾರೆ.



































