Author name: Tejas

ಅತ್ಯಾಚಾರ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಆಗಿದೆ ಎಂದು ತಿಳಿದು ಬಂದಿದೆ. ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಸಹ ಮುನಿರತ್ನಗೆ ಜಾಮೀನು ದೊರೆತಿದೆ. ಮಂಗಳವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು Read More »

ಸುಳ್ಯ ದಸರಾ ಉತ್ಸವದಲ್ಲಿ ಮನರಂಜಿಸಿದ ಭಕ್ತಿಪ್ರಧಾನ ನಾಟಕ ಮಣಿಕಂಠ ಮಹಿಮೆ

ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024 ಆರನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮವು ಅ.14ರಂದು ರಾತ್ರಿ ಶ್ರೀ ಶಾರದಾಂಬ ಕಲಾವೇದಿಕೆಯಲ್ಲಿ ಮಣಿಕಂಠ ಮಹಿಮೆ ಮಹಿಳೆ ತುಳು ನಾಟಕ ಪ್ರದರ್ಶನಗೊಂಡು ಭಕ್ತರ ಮನರಂಜಿಸಿತು.ರಾತ್ರಿ ಶ್ರೀದೇವಿಗೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ

ಸುಳ್ಯ ದಸರಾ ಉತ್ಸವದಲ್ಲಿ ಮನರಂಜಿಸಿದ ಭಕ್ತಿಪ್ರಧಾನ ನಾಟಕ ಮಣಿಕಂಠ ಮಹಿಮೆ Read More »

ಭಾರೀ ಮಳೆ: ಕೆಲವು ರಾಜ್ಯಗಳಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಭಾರತದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ನಾಲ್ಕು ದಿನ ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಹೀಗಾಗಿ ಈ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅನೇಕ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹ ಮಹತ್ವದ ಸೂಚನೆ ನೀಡಿದ್ದಾರೆ. ಜನರು ಮನೆಯಲ್ಲಿಯೇ ಇರಿ ಎಂದು ಐಎಮ್‌ಡಿ ಎಚ್ಚರಿಸಿದೆ

ಭಾರೀ ಮಳೆ: ಕೆಲವು ರಾಜ್ಯಗಳಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಶಾಲಾ ಬಸ್ ಚಾಲಕನಿಗೆ ಪಿಡ್ಸ್ ರೋಗ,ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್

ಬಂಟ್ವಾಳ: ಖಾಸಗಿ ಶಾಲೆಯ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ‌ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಅ.14 ರಂದು ನಡೆದಿದೆ.ಬಡಕಬೈಲು ಸೈಂಟ್ ಡೊಮಿನಿಕ್‌ ಆಂಗ್ಲ ‌ಮಾಧ್ಯಮ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂಬವರಿಗೆ ಮೂರ್ಚೆ ರೋಗ ಬಾಧಿಸಿದ ಪರಿಣಾಮ ಬಸ್ ನಿಯಂತ್ರಣ ‌ಕಳೆದುಕೊಂಡು ರಸ್ತೆ ಬದಿಗೆ ತೆರಳಿ ವಿದ್ಯುತ್ ಕಂಬಕ್ಕೆ ‌ಡಿಕ್ಕಿ‌ಹೊಡೆದಿದೆ.ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ.

ಶಾಲಾ ಬಸ್ ಚಾಲಕನಿಗೆ ಪಿಡ್ಸ್ ರೋಗ,ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್ Read More »

ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಾವನಿಂದ ಕೊಲೆಯತ್ನ

ಕೊಡಿಯಾಲ :ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ಅವರು ಮನೆಯಲ್ಲಿ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು,

ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಾವನಿಂದ ಕೊಲೆಯತ್ನ Read More »

ಔಷಧಿಗೆ ತೆರಳಿದ ಯುವಕ ನಾಪತ್ತೆ

ಚೆಂಬು ಗ್ರಾಮದ ಊರುಬೈಲು ಹರೀಶ – ಭಾರತಿ ದಂಪತಿಗಳ ಪುತ್ರ ಕುಶಾಂತ್ ನಾಮಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.ಆತನು ಅಕ್ಟೋಬರ್ 13ರಂದು ಮನೆಯಿಂದ ಔಷಧಿಗೆ ತೆರಳಿದ್ದವನು ಮನೆಗೆ ಬಂದಿಲ್ಲ.ಹುಡುಗ ನಾಪತ್ತೆಯಾಗಿ ಮನೆಗೆ ಸಂಜೆಯಾದರೂ ಬಾರದಿದ್ದುದರಿಂದ ಮನೆಯವರು ಹುಡುಕಾಟ ಆರಂಭಿಸಿದ್ದಾರೆ. ಪೋಲೀಸರಿಗೂ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ

ಔಷಧಿಗೆ ತೆರಳಿದ ಯುವಕ ನಾಪತ್ತೆ Read More »

ಅವಿನಾಶ್ ಬಸ್ಸು ಕಂಡೆಕ್ಟ ರ್ ಎದೆನೋವಿನಿಂದ ನಿಧನ

ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಗುರು ಪ್ರಸಾದ್ ಕುಂಚಡ್ಕ ಸಾವನ್ನಪ್ಪಿದ ಕಂಡೆಕ್ಟರ್ ಎಂದು ತಿಳಿದು ಬಂದಿದೆ.ಅವರಿಗೆ 30 ವರ್ಷ ಪ್ರಾಯವಾಗಿತ್ತು.ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಅವಿನಾಶ್ ಬಸ್ಸು ಕಂಡೆಕ್ಟ ರ್ ಎದೆನೋವಿನಿಂದ ನಿಧನ Read More »

ಕಾರು ಪಲ್ಟಿಯಾಗಿ ಮಹಿಳೆ ಸಾವು

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ತೋಟಕ್ಕೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಬಿಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲರವರ ಸಹೋದರಿ ಕೋಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ವ.) ಮೃತಪಟ್ಟ ಮಹಿಳೆಯಾಗಿದ್ದಾರೆ.ಚಾಲಕ ರೂಪೇಶ್ (40 ವ.) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.ರೂಪೇಶ್ ಅವರ ಪತ್ನಿ ಸುಚಿತ್ರ (33 ವ.)

ಕಾರು ಪಲ್ಟಿಯಾಗಿ ಮಹಿಳೆ ಸಾವು Read More »

ಮಡಿಕೇರಿ ದಸರಾ ಸಮಿತಿಯಿಂದ ಬಹುಭಾಷಾ ಕವಿಗೋಷ್ಠಿ ಭಾಷಾಂತರ ಕೆಲಸ ಮತ್ತಷ್ಟು ಹೆಚ್ಚು ಆಗಲಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ

ಮಡಿಕೇರಿ :-ರಾಷ್ಟ್ರದಲ್ಲಿ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿರುವ ಕನ್ನಡ ಭಾಷೆ ಅತ್ಯಂತ ಶ್ರೀಮಂತಿಕೆ ಹೊಂದಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಕನ್ನಡ ಸೇರಿದಂತೆ ಇತರೆ ಭಾಷೆಗಳಿಗೂ ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆ, ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಬೇಕು ಎಂದು ಸಲಹೆ ಮಾಡಿದರು.ಕತೆ, ಕವನ,

ಮಡಿಕೇರಿ ದಸರಾ ಸಮಿತಿಯಿಂದ ಬಹುಭಾಷಾ ಕವಿಗೋಷ್ಠಿ ಭಾಷಾಂತರ ಕೆಲಸ ಮತ್ತಷ್ಟು ಹೆಚ್ಚು ಆಗಲಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ Read More »

ಸಂಪಾಜೆಯಲ್ಲಿ ಭೀಕರ ಕಾರು ಅಪಘಾತ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿ ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಸಂಪಾಜೆ ಶಾಲೆಯ ಬಳಿ ನಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಕೊಡಗು ಸಂಪಾಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಪಾಜೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಂಪಾಜೆಯಲ್ಲಿ ಭೀಕರ ಕಾರು ಅಪಘಾತ Read More »

error: Content is protected !!
Scroll to Top