ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ಕಡಬ: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.ಮೃತರನ್ನು ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ಮೃತರು ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಅಪಘಾತದ ದಶ್ಯ ಇಂಡಸ್ಟ್ರೀಸ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »