Author name: Tejas

ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ದಂಪತಿಗಳು ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ಎಸ್ ಅಂಗಾರ,‌ಸುಳ್ಯ ಮಂಡಲಧ್ಯಕ್ಷ ವೆಂಕಟ್ ವಳಲಂಬೆ ಸಹಿತ ಪಕ್ಷದ ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ Read More »

ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಸಹಕಾರದೊಂದಿಗೆ ದಿ. ಯು. ಸು. ಗೌ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ 2025 ನವೆಂಬರ್ 2ರಂದುಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ‌ ಉದ್ಘಾಟನೆಗೊಂಡಿದೆ.ರಾಷ್ಟ್ರ ಧ್ವಜಾರೋಹಣ ವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪಿ. ಬಿ. ಸುಧಾಕರ ರೈ ನೆರವೇರಿಸಿದರು.ಕನ್ನಡ ಧ್ವಜಾರೋಹಣ ವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ. ಲಿಂಗಪ್ಪ

ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ Read More »

ಪರಿವಾಕಾನ ಬಳಿ ಮಿನಿ ಬಸ್ ಅಪಘಾತಗೊಂಡು ಹಲವರಿಗೆ ಗಾಯ

ಮೈಸೂರಿನಿಂದ ಹಿಂದಿರುಗುತ್ತಿದ್ದ ಮಿನಿ ಬಸ್ ಅ.2ರಂದು ಮುಂಜಾನೆ ಸುಳ್ಯ ತಾಲೂಕಿನ ಪರಿವಾರಕಾನ ಬಳಿ ಅಪಘಾತಗೊಂಡ ಘಟನೆ ವರದಿಯಾಗಿದೆ.ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.ಅಪಘಾತದ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವಾಗಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

ಪರಿವಾಕಾನ ಬಳಿ ಮಿನಿ ಬಸ್ ಅಪಘಾತಗೊಂಡು ಹಲವರಿಗೆ ಗಾಯ Read More »

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ ಸಂಭ್ರಮದ ಮೂಲಕ ಕನ್ನಡದ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ : ಡಾ.ಯು.ಪಿ‌ ಶಿವಾನಂದ

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ ಎಂಬ ವಿನೂತನ ಸರಣಿ ಕಾರ್ಯಕ್ರಮ ಹಮ್ಮಿಕೊಂಡು ನಾಡಿನಲ್ಲಿ ಕನ್ನಡದ ಕಂಪನ್ನು ಪಸರಿಸುವ ಕೆಲಸವನ್ನು ಮಾಡುತ್ತಿರುವುದು‌ ಶ್ಲಾಘನೀಯ ಎಂದು ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ.ಯು.ಪಿ.ಶಿವಾನಂದ ಹೇಳಿದರು.ಅವರು ನ.2ರಂದು ರಂಗಮಯೂರಿ ಕಲಾಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 7 ದಿನಗಳ ಕಾಲ ನಡೆಯಲಿರುವ ಕನ್ನಡಕ್ಕೆ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ 2025ನ್ನು ಉದ್ಘಾಟಿಸಿ ಮಾತನಾಡಿದರು.ಸುಳ್ಯ ಕಸಾಪ ವತಿಯಿಂದ 7 ದಿನಗಳ

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ ಸಂಭ್ರಮದ ಮೂಲಕ ಕನ್ನಡದ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ : ಡಾ.ಯು.ಪಿ‌ ಶಿವಾನಂದ Read More »

ಶಿಕ್ಷನಿಂದ ವಿದ್ಯಾರ್ಥಿಗೆ ಹಲ್ಲೆ

ಸುಳ್ಯ ತಾಲ್ಲೂಕು ಆಲೆಟ್ಟಿ ಗ್ರಾಮದ ಕೋಲ್ಚಾರು ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.ಗಂಭೀರ ಗಾಯಗೊಂಡ ವಿಧ್ಯಾರ್ಥಿ ತಂದೆ ಹಾಗೂ ತಾಯಿ ಇಬ್ಬರು ಕೂಡ ವಿಕಲಚೇತನರು ಎನ್ನಲಾಗಿದೆ.ಶಿಕ್ಷಕ ಮನುಕುಮಾರ್ ವಿಧ್ಯಾರ್ಥಿ ಮೇಲೆ ತೀವ್ರ ಹಲ್ಲೆ ನಡೆಸಿದ್ದು ವಿಧ್ಯಾರ್ಥಿ ಕೈ ಮುರಿತವಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪೋಷಕರು ಸುಳ್ಯ ಪೋಲಿಸ್ ಠಾಣೆ ಹಾಗೂ ಚೈಲ್ಡ್ ಕೇರ್ ಗೆ ದೂರು ನೀಡಿರುವುದಾಗಿ ತಿಳಿದುಬಂದಿದೆ.

ಶಿಕ್ಷನಿಂದ ವಿದ್ಯಾರ್ಥಿಗೆ ಹಲ್ಲೆ Read More »

ಮಂಗಳೂರು: ರೌಡಿಶೀಟರ್ ನ ಬರ್ಬರ ಕೊಲೆ

ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತನನ್ನು ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ಈತ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನೌಫಲ್ ನ ಮೃತದೇಹವನ್ನು ಕಾಸರಗೋಡಿನ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ರೌಡಿಶೀಟರ್ ನ ಬರ್ಬರ ಕೊಲೆ Read More »

ಪ್ರಜಾಧ್ವನಿ ಕರ್ನಾಟಕ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಇಂದು ಸುಳ್ಯದ ಶಿವಕೃಪಾ ಸಭಾ ಭವನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಅಶೋಕ್ ಎಡಮಲೆ ಅವರು ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಖ್ಯಾತ ವ್ಯಂಗ್ಯಾ ಚಿತ್ರಕಾರ, ಅಂಕಣಕಾರ ದಿನೇಶ್ ಕುಕ್ಕುಜಡ್ಕ ಅವರು ಭಾಗವಹಿಸಿ ಮಾತನಾಡುತ್ತ ಕನ್ನಡ ಭಾಷೆಯ ಬಳಕೆ ಪ್ರಮಾಣ 3.73 ಪ್ರಮಾಣದಲ್ಲಿದ್ದು ಕನ್ನಡ ಭಾಷೆ ಭವಿಷ್ಯದಲ್ಲಿ ಇನ್ನಷ್ಟು ಅಪಾಯದಲ್ಲಿ ಸಿಲುಕದಂತೆ ಕನ್ನಡಿಗರು ಜಾಗೃತಿಯಾಗುವ ಕಾಲ ಬಂದಿದೆ. ಇಂಗ್ಲಿಷ್ ಬಲ ಕೈಯಾದರೆ ಕನ್ನಡ ಎಡ ಗೈಯಾಗಬೇಕು, ಮನೆಯ ಮಾತೃ ಭಾಷೆ ಅಂತರಂಗದ ಬಾಷೆಯಾಗಬೇಕು.ಪ್ರಾಚೀನ

ಪ್ರಜಾಧ್ವನಿ ಕರ್ನಾಟಕ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ವಹಿಸಿದರು.ವೇದಿಕೆಯಲ್ಲಿ ಶಿಕ್ಷಕರಾದ ಶಿವಪ್ರಕಾಶ ಕೆ., ಮೀನಕುಮಾರಿ ಕೆ., ಸವಿತಾ ಕುಮಾರಿ, ದೈ.ಶಿ.ಶಿಕ್ಷಕ ಶಿವಪ್ರಸಾದ ಕೆ.ಇದ್ದರು. ಪ್ರ. ಶಿಕ್ಷಣಾರ್ಥಿಗಳಾದ ನಿಶ್ಮಿತಾ ಕೆ. ನಿರೂಪಿಸಿ, ಆಶಾ ಶ್ರೀ ಟಿ ಪಿ ಸ್ವಾಗತಿಸಿದರು. ಯಜ್ಞ ಎಂ. ಸಾಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ ಡಿ. ವಂದಿಸಿದರು. ಸಿಬ್ಬಂದಿ ಬೇಬಿ ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ Read More »

ಸಂಪಾಜೆ ಗ್ರಾಮದ ದರ್ಕಾಸ್ ಹಾಗೂ ಪೆರುಂಗೊಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಶಿಲಾನ್ಯಾಸ

ಸಂಪಾಜೆ ಗ್ರಾಮದ ಪೆರುಂಗೊಡಿ ಹಾಗೂ ದರ್ಕಾಸ್ ಕೊಪ್ಪತಕಜೆ ರಸ್ತೆ ಕಾಂಕ್ರಿಟ್ ಕಾಮಗಾರಿಗೆ 65 ಲಕ್ಷ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಯೋಜನೆಯಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ತಲಾ 20ಲಕ್ಷದಂತೆ 2 ರಸ್ತೆಗಳಿಗೆ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಮುಖಾಂತರ 40ಲಕ್ಷ ಮಂಜೂರಾಗಿದ್ದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ರವರು ಅಭಿವೃದ್ಧಿ ಕಾರ್ಯಕ್ಕೆ ರಾಜಕೀಯ ಸಲ್ಲದು, ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಅನುದಾನ ದೊರಕಿಸಿಕೊಟ್ಟ ಟಿ ಎಂ ಶಾಹಿದ್ ತೆಕ್ಕಿಲ್

ಸಂಪಾಜೆ ಗ್ರಾಮದ ದರ್ಕಾಸ್ ಹಾಗೂ ಪೆರುಂಗೊಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಶಿಲಾನ್ಯಾಸ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಎಂದು ಸುಳ್ಯ ಎನ್ನೆಂ ಸಿ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂ ಅಖಿಲ ಭಾರತ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯ ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

error: Content is protected !!
Scroll to Top