Author name: Tejas

ಅಜ್ಜಾವರ ; ಪಂಚಸಪ್ತತಿ 75 ದಿನಗಳ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ

ಯುವಜನ ಸoಯುಕ್ತ ಮಂಡಳಿ (ರಿ) ಸುಳ್ಯ,ಪ್ರತಾಪ ಯುವಕ ಮಂಡಲ(ರಿ) ಅಜ್ಜಾವರ ಮತ್ತು ಚೈತ್ರ ಯುವತಿ ಮಂಡಲ (ರಿ) ಅಜ್ಜಾವರ ಇವುಗಳ ಸಹಯೋಗದಲ್ಲಿ ಪಂಚಸಪ್ತತಿ -2025 ರ 75 ದಿನಗಳ ಸ್ವಚ್ಛತಾ ಅಭಿಯಾನದ ಅಂಗವಾಗಿ ಪ್ರಥಮ ಕಾರ್ಯಕ್ರಮ ವಾಟ್ಸಪ್ ರಸಪ್ರಶ್ನೆ ಕಾರ್ಯಕ್ರಮಕ್ಕೆ ಇಂದು ನಿವೃತ್ತ ಮುಖ್ಯ್ಯೋಪಾಧ್ಯಾಯರಾದ ಶ್ರೀ ಯಶೋಧರ ನಾರಲು ಇವರು ಅಜ್ಜಾವರದಲ್ಲಿ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಪ್ರತಾಪ ಯುವಕ ಮಂಡಲ ಅಧ್ಯಕ್ಷ ಶ್ರೀ ಗುರುರಾಜ್,ಕಾರ್ಯದರ್ಶಿ ನವೀನ್ ಕುಮಾರ್, ಕೋಶಾಧಿಕಾರಿ ಶ್ರೀ ಲೋಕೇಶ್ ರಾವ್,ಗಿರಿಧರ,ಅಕ್ಷತ್ […]

ಅಜ್ಜಾವರ ; ಪಂಚಸಪ್ತತಿ 75 ದಿನಗಳ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ Read More »

ದ.ಕ ಜಿಲ್ಲೆಯಲ್ಲಿ ಆಹಾರ ಬೆಳೆ ವರ್ಷದಿಂದ ವರ್ಷಕ್ಕೆ ಕುಸಿತ : ಶಿವಶಂಕರ ದಾನಗೊಂಡರ್

ದ.ಕ ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಯನ್ನು ಹೆಚ್ಚು ಬೆಳೆಯಲಾಗುತ್ತಿದ್ದು ವಾಣಿಜ್ಯ ಬೆಳೆಯಿಂದ ಆಹಾರ ಬೆಳೆಯನ್ನು ಬೆಳೆಯಲು ಮನಸು ಮಾಡಬೇಕೆಂದು ಎಂದು ಜಿಲ್ಲಾ ಕೃಷಿ ಇಲಾಖೆಯ ಉಪನಿರ್ದೆಶಕ ಶಿವಶಂಕರ ದಾನಗೊಂಡರ್ ಹೇಳಿದರು.ದ.ಕ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಸುಳ್ಯ ಕೃಷಿ ಇಲಾಖೆಯಲ್ಲಿ ಅ.11ರಂದು ನಡೆದ ಪ್ರಧಾನ ಮಂತ್ರಿಯವರ ಧನ್ ಧಾನ್ಯ ಕೃಷಿ ಯೋಜನೆ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತದಲ್ಲಿ ಧಾನ್ಯ ಉತ್ಪಾದನೆಗಳಿಗೆ ಕೊರತೆಯಿಲ್ಲ.ಸಾಕಾಷ್ಟು ಧಾನ್ಯ ಬೆಳೆಗಳನ್ನು ಬೆಳೆಯಲಾಗುತ್ತಿದೆ. ದ.ಕ ಜಿಲ್ಲೆಯಲ್ಲಿ ಆಹಾರ ಬೆಳೆ ಬೆಳೆಯುವ

ದ.ಕ ಜಿಲ್ಲೆಯಲ್ಲಿ ಆಹಾರ ಬೆಳೆ ವರ್ಷದಿಂದ ವರ್ಷಕ್ಕೆ ಕುಸಿತ : ಶಿವಶಂಕರ ದಾನಗೊಂಡರ್ Read More »

ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ತಮಿಳುನಾಡಿನ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ, ಪತಿ ತನ್ನ ಪತ್ನಿಯನ್ನು ರಸ್ತೆಯ ಮಧ್ಯದಲ್ಲಿ ಚಾಕುವಿನಿಂದ ಇರಿದು ಕ್ರೂರವಾಗಿ ಕೊಲೆ ಮಾಡಿದ ಘಟನೆ ವರದಿಯಾಗಿದೆ. ಎ.ಪಿ.ಡಿ. ಪ್ರದೇಶದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಶ್ವೇತಾ ಕೆಲಸಕ್ಕೆ ಹೋಗುತ್ತಿದ್ದಾಗ ತಡೆದು ಪತಿ ಮಾತುನಾಡಲು ಪ್ರಯತ್ನ ನಡೆಸಿದ್ದಾನೆ. ಶ್ವೇತಾ ನಿರಾಕರಿಸಿದಾಗ, ಮಾತಿಗೆ ಮಾತು ಬೆಳೆದು ಜಗಳವಾಯಿತು, ಈ ವೇಳೆ ಅವಳನ್ನು ಚಾಕುವಿನಿಂದ ಇರಿದು ಕೊಂದು ಚರಂಡಿಗೆ ಎಸೆದು ಪರಾರಿಯಾಗಲು ಯತ್ನಿಸಿದ್ದಾನೆ. ಸಾರ್ವಜನಿಕರು ಗಂಡನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ನಂತರ ಆತನನ್ನು ಬಂಧಿಸಲಾಯಿತು.

ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ Read More »

ಮಂಡೆಕೋಲು : 21ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಂಡೆಕೋಲು ಗ್ರಾಮದ ನಾಲ್ಕು ಒಕ್ಕೂಟಗಳಾದ ಮಂಡಕೋಲು, ಕಲ್ಲಡ್ಕ, ಪೇರಾಲು ಹಾಗೂ ಪೇರಾಲು ಎ ಒಕ್ಕೂಟಗಳ ವತಿಯಿಂದ ನಡೆಯುವ ಇಪ್ಪತ್ತೊಂದನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಇದೇ ಬರುವ ಒಕ್ಟೋಬರ್ 26ನೇ ತಾರೀಕಿನಂದು ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೇಂದ್ರ‌ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಹಿಸಿದ್ದರು.26 ನೇ ತಾರೀಕಿನಂದು ಬೆಳಗ್ಗೆ 7 ಕ್ಕೆ ಪೂಜೆ ಆರಂಭಗೊಳ್ಳಲಿದೆ. ಪೂರ್ವಾಹ್ನ 11 ಗಂಟೆಯಿಂದ

ಮಂಡೆಕೋಲು : 21ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ದೋಸ್ತ್ ವಾಹನ ಬುಲೆಟ್ ಬೈಕ್ ನಡುವೆ ಭೀಕರ ಅಪಘಾತ ಬುಲೆಟ್ ಸವಾರ ಸಾವು

ಸುಳ್ಯ ಸಮೀಪದ ಸುಳ್ಯ ನಾಗಪಟ್ಟಣ ರಸ್ತೆಯಲ್ಲಿ ದೋಸ್ತ್ ವಾಹನ ಮತ್ತು ಬುಲೆಟ್ ಬೈಕ್ ನಡುವೆ ಅಪಘಾತ ಸಂಭವಿಸಿ ಬುಲೆಟ್ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇದೀಗ ವರದಿಯಾಗಿದೆ.ಬುಲೆಟ್ ಬೈಕ್ ಸವಾರ ಕಲ್ಲಪಳ್ಳಿ ನಿವಾಸಿ ಪ್ರದೀಪ್ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.ಹೆಚ್ಚಿನ ಮಾಹಿತಿ‌ ತಿಳಿದು ಬರಬೇಕಾಗಿದೆ.

ದೋಸ್ತ್ ವಾಹನ ಬುಲೆಟ್ ಬೈಕ್ ನಡುವೆ ಭೀಕರ ಅಪಘಾತ ಬುಲೆಟ್ ಸವಾರ ಸಾವು Read More »

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ ಒಟ್ಟು 7 ಅಂಗನವಾಡಿ ಕಾರ್ಯಕರ್ತೆ ಹಾಗೂ 18 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಗಳ ಹುದ್ದೆಗೆ ಅನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: 20.10.2025ರವರೆಗೆ ವಿಸ್ತರಿಸಲಾಗಿದೆ. ಪ್ರಸ್ತುತ 75 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅವುಗಳು ಪರಿಶೀಲನೆಗೆ ಲಭ್ಯವಾಗುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ 3 ಹಂತಗಳನ್ನು ಪೂರ್ಣಗೊಳಿಸಿದ್ದಲ್ಲಿ ಮಾತ್ರ ಅರ್ಜಿಗಳು ಪರಿಶೀಲನೆಗೆ ಲಭ್ಯವಾಗುತ್ತದೆ. ಪ್ರತಿ ಹಂತ ಪೂರ್ಣಗೊಂಡಾಗ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆಗೆ 1ನೇ ಹಂತ, 2ನೇ ಹಂತ,

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಅಡ್ತಲೆಯಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಅರಂತೋಡು, ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಹಾಗೂ ಚಂದನ ಯುವತಿ ಮಂಡಲ (ರಿ.) ಅಡ್ತಲೆ ಇವರ ಸಹಕಾರದೊಂದಿಗೆ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 ,75 ದಿನಗಳ ಸ್ವಚ್ಚತಾ ಅಭಿಯಾನಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಇವರು ದೀಪ ಬೆಳಗುವುದರ ಮೂಲಕ ಚಾಲನೆಯನ್ನು ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಭವಾನಿ ಶಂಕರ ಅಡ್ತಲೆ,

ಅಡ್ತಲೆಯಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ Read More »

ಮೈಸೂರಿನಲ್ಲಿ ಬೆಲೂನ್ ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಅಪಹರಿಸಿ ರೇಪ್ ಆ್ಯಂಡ್ ಮರ್ಡರ್ : ಆರೋಪಿ ಕಾಲಿಗೆ ಗುಂಡು

ದಸರಾ ಸಂದರ್ಭದಲ್ಲಿ ಮೈಸೂರಿಗೆ ಬೆಲೂನ್ ಮಾರಲು ವಲಸೆ ಬಂದಿದ್ದ 10 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಾಳೆ.ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿ ಕಾರ್ತಿಕ್‌ನನ್ನು ಕೊಳ್ಳೇಗಾಲದಲ್ಲಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಬಾಲಕಿಯ ಕುಟುಂಬ ಕಲಬುರಗಿಯಿಂದ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿತ್ತು. ಇವರು ದೊಡ್ಡಕೆರೆ ಮೈದಾನದಲ್ಲಿ ತಂಗಿದ್ದು ಬೇರೆ ಬೇರೆ ಸ್ಥಳಗಳಲ್ಲಿ ಬೆಲೂನ್ ಮಾರುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಬೆಲೂನ್ ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಅಪಹರಿಸಿ ರೇಪ್ ಆ್ಯಂಡ್ ಮರ್ಡರ್ : ಆರೋಪಿ ಕಾಲಿಗೆ ಗುಂಡು Read More »

ಪ್ರಿಯತಮೆ ಜತೆಗಿದ್ದ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ,ನೊಂದ ಯುವಕ ಆತ್ಮಹತ್ಯೆ

ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಲ್ಮಣ್ಣಿನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ.ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ (23) ಎಂದು ತಿಳಿದು ಬಂದಿದೆ.ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.ಡೆತ್ ನೋಟ್‌ನಲ್ಲಿ ನಾಲ್ವರು ಬ್ಲ್ಯಾಕ್‌ಮೇಲ್ ಮಾಡಿದವರ ಹೆಸರು ಬರೆದಿಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೆಸರಿಸಿದವರನ್ನು ಪೊಲೀಸರು

ಪ್ರಿಯತಮೆ ಜತೆಗಿದ್ದ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ,ನೊಂದ ಯುವಕ ಆತ್ಮಹತ್ಯೆ Read More »

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 80ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ.ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್‌ನಲ್ಲಿ ಅ.8ರಿಂದ 14ರವರೆಗೆ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿದೆ. ಈ

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ Read More »

error: Content is protected !!
Scroll to Top