Author name: Tejas

ಭಾರೀ ಮಳೆ ಹಿನ್ನಲೆ,ದ.ಕ ಜಿಲ್ಲಾ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ

ದ.ಕ‌ ಜಿಲ್ಲೆಯಲ್ಲಿ ಭಾರೀ ಸುರಿಯುತ್ತಿದ್ದು ದಿನಾಂಕ: 28.05.2025 ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 27.05.2025 ಮತ್ತು ದಿನಾಂಕ: 28.05.2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.ನೀರು ಇರುವ ತಗ್ಗು ಪ್ರದೇಶ, ಕೆರೆ, […]

ಭಾರೀ ಮಳೆ ಹಿನ್ನಲೆ,ದ.ಕ ಜಿಲ್ಲಾ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ Read More »

ಸುಳ್ಯ ಕೆ.ಆರ್.ಟಿ.ಸಿ‌ ಬಸ್ಸ್ ನಿಲ್ದಾಣದಲ್ಲಿ ಏಕಾಏಕಿ ಹಿಂದಕ್ಕೆ ಚಲಿಸಿದ‌ ಪ್ರಯಾಣಿಕರಿದ್ದ ಬಸ್ಸ್ ,ತಪ್ಪಿದ ಭಾರೀ ಅನಾಹುತ

ಸುಳ್ಯ ಕೆ.ಎಸ್.ಆರ್.ಟಿ.ಸಿ‌ ಬಸ್ಸು ನಿಲ್ದಾಣದಲ್ಲಿ ಮೇ.26ರಂದು ಪುತ್ತೂರು ಸುಳ್ಯ ಸರ್ವಿಸ್ ಬಸ್ಸ್ ಹಿಂದಕ್ಕೆ ಚಲಿಸಿ ಚಾಲಕರೋರ್ವರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ವರದಿಯಾಗಿದೆ.ಮಧ್ಯಾಹ್ನ ನಂತರ 2.5೦ ಗಂಟೆಗೆ ಪುತ್ತೂರು ಸುಳ್ಯ ಸರ್ವಿಸ್ ಬಸ್ಸಿನಲ್ಲಿ‌ ಸುಮಾರು 35ರಿಂದ 40 ಮಂದಿ ಪ್ರಯಾಣಿಕರು‌ ಕುಳಿತುಕೊಂಡಿದ್ದರು.ಈ ಸಂದರ್ಭದಲ್ಲಿ ಬಸ್ಸು ಏಕಾಏಕಿ ಹಿಂದಕ್ಕೆ ಚಲಿಸಿತು.ಬಸ್ಸು ಹಿಂದಕ್ಕೆ ಚಲಿಸುತ್ತಿರುವುದನ್ನು ಕಂಡ ಪ್ರಯಾಣಿಕರು ಬೊಬ್ಬೆ ಹೊಡೆಯ ತೊಡಗಿದರು.ಕೂಡಲೇ ಬೇರೊಬ್ಬ ಕೆ.ಎಸ್.ಆರ್.ಟಿ.ಬಸ್ಸಿನ ಚಾಲಕರು ಓಡಿ ಬಂದು ಕೈಯಿಂದ ಬ್ರೇಕ್ ಒತ್ತಿ ಬಸ್ಸು ಹಿಂದಕ್ಕೆ ಚಲಿಸುವುದನ್ನು

ಸುಳ್ಯ ಕೆ.ಆರ್.ಟಿ.ಸಿ‌ ಬಸ್ಸ್ ನಿಲ್ದಾಣದಲ್ಲಿ ಏಕಾಏಕಿ ಹಿಂದಕ್ಕೆ ಚಲಿಸಿದ‌ ಪ್ರಯಾಣಿಕರಿದ್ದ ಬಸ್ಸ್ ,ತಪ್ಪಿದ ಭಾರೀ ಅನಾಹುತ Read More »

ಆಯಿಷಾ ಹಜ್ಜುಮ್ಮ ನಿಧನ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ತೆಕ್ಕಿಲ್ ಗೆ ಭೇಟಿ -ಸಾಂತ್ವನ:

ಸಂಪಾಜೆ ಪೇರಡ್ಕ ಗೂನಡ್ಕ ಮೊಹಿಯುದ್ದಿನ್ ಜುಮಾ ಮಸೀದಿ ಮಾಜಿ ಅಧ್ಯಕ್ಷರು ಅರಂತೋಡು ಎ ಎಚ್ ವೈ ಎ ಸ್ಥಾಪಕಾಧ್ಯಕ್ಷರಾದ ಟಿ ಎಂ ಬಾವ ಹಾಜಿ ತೆಕ್ಕಿಲ್ ಅವರ ಪತ್ನಿ ಪೊನ್ನಂಬಿಲಾತ್ ಪಾರಪ್ರವನ್ ಇರಿಂಘತ್ ನಾರಾನತ್ ಆಯಿಷಾ ಹಜ್ಜುಮ್ಮ ಅವರ ನಿಧನದ ಹಿನ್ನಲೆಯಲ್ಲಿ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ತೆಕ್ಕಿಲ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಈ ಸಂದರ್ಭದಲ್ಲಿ ಟಿ ಎಂ ಶಾಹಿದ್ ತೆಕ್ಕಿಲ್, ಟಿ ಎಂ ಜಾವೆದ್ ತೆಕ್ಕಿಲ್

ಆಯಿಷಾ ಹಜ್ಜುಮ್ಮ ನಿಧನ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ತೆಕ್ಕಿಲ್ ಗೆ ಭೇಟಿ -ಸಾಂತ್ವನ: Read More »

ಮುಂದಿನ ಐದು ದಿವಸ ಭಾರೀ ಮಳೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ !

ಬೆಂಗಳೂರು : ನೈಋತ್ಯ ಮಾನ್ಸೂನ್ ಪ್ರಾರಂಭದ ಹೊತ್ತಿನಲ್ಲಿ ಕರ್ನಾಟಕದ ಹವಾಮಾನ ವರದಿಯಲ್ಲಿ ಮುಂದಿನ ಐದು ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಪೂರ್ವ ಅರಬ್ಬಿ ಸಮುದ್ರದ ಗೋವಾ ಹಾಗೂ ಕೊಂಕಣ ಕರಾವಳಿ ಸಮೀಪದಲ್ಲಿ ವಾಯುಭಾರ ಕುಸಿತದ ಪ್ರಭಾವ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಸಮುದ್ರ ಮೇಲ್ಮೈಯಿಂದ 5.8 ಕಿಲೋಮೀಟರ್ ಎತ್ತರದವರೆಗೆ ಚಂಡಮಾರುತದ ಪ್ರಸರಣವೂ ಇದೆ. ಈ ಹವಾಮಾನ ವೈಪರಿತ್ಯ ಉತ್ತರಕ್ಕೆ ಚಲಿಸುವ ಸಂಭವವಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಎಲ್ಲ

ಮುಂದಿನ ಐದು ದಿವಸ ಭಾರೀ ಮಳೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ! Read More »

ಭಾರೀ ಮಳೆಯಿಂದು ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಭಾರೀ ಮಳೆಯಿಂದಾಗಿ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ.ಪಶ್ಚಿಮಘಟ್ಟದಲ್ಲಿ ಭಾರಿ ಮಳೆಯಾದ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಹೀಗಾಗಿ ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚನೆ ನೀಡಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಅಲ್ಲದೆ ದೇವಸ್ಥಾನದ ಆಡಳಿತ ಮಂಡಳಿ ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿ ಯನ್ನು ನೇಮಕ ಮಾಡಿದೆ.

ಭಾರೀ ಮಳೆಯಿಂದು ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ Read More »

ವಿದ್ಯತ್ ಲೈನ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಗಂಭೀರ

ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಕೆಳಗೆ ಬಿದ್ದ ಗಾಯಗೊಂಡ ಘಟನೆ ಕಲ್ಲುಗುಂಡಿ ಸಂಪಾಜೆಯ ಕಡಪಾಲದಲ್ಲಿ ಸೋಮವಾರ ಸಂಭವಿಸಿದೆ. ಲೈನ್‌ಮ್ಯಾನ್ ನವೀನ್ ಡಿಸೋಜಾ ವಿದ್ಯುತ್ ಶಾಕ್‌ಗೊಳಗಾದ ವ್ಯಕ್ತಿ.ಊರವರು ಸೇರಿ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಅರಂತೋಡು ಸಮೃದ್ಧಿ ಮಾರ್ಟ್‌ನ ಆಂಬ್ಯುಲೆನ್ಸ್‌ನಲ್ಲಿ ಶರತ್‌ರವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತಂದರು.

ವಿದ್ಯತ್ ಲೈನ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಗಂಭೀರ Read More »

ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ.ಸ್ಥಳಕ್ಕೆ ರಾಧಾಕೃಷ್ಣ ಬೊಳ್ಳೂರು ಭೇಟಿ

ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಭಾರಿ ಗಾಳಿ ಮಳೆಗೆ ಮನೆಗಳಿಗೆ ಮರ ಮುರಿದು ಬಿದ್ದು ಅಪಾರ ಹಾನಿಯಾಗಿದೆ. ಮನೆಯಲ್ಲಿ ವಾಸ್ತವ್ಯವಿದ್ದ ನಿವಾಸಿಗಳಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ, ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರು ಹಾನಿಯಾದ ಮನೆಗಳನ್ನು ವೀಕ್ಷಿಸಿ ಸಂತ್ರಸ್ತರಿಗೆ ಸಾಂತ್ವನ ನೀಡಿದರು. ಕೂಡಲೇ ಅಧಿಕಾರಿಗಳನ್ನು ಸಂಪರ್ಕಿಸಿ ಹಾನಿಗೊಳಗಾದ ಮನೆ ಮತ್ತು ನಿವಾಸಿಗಳಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ

ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ.ಸ್ಥಳಕ್ಕೆ ರಾಧಾಕೃಷ್ಣ ಬೊಳ್ಳೂರು ಭೇಟಿ Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಎನ್.ಡಿ.ಆರ್.ಎಫ್ ತಂಡ ಆಗಮನ

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡ ಆಗಮಿಸಿದೆ.ಈಗಾಗಲೆ ಎರಡೂ ತಂಡಗಳು ಜಿಲ್ಲೆಗೆ ಆಗಮಿಸಿವೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್‌ ತಿಳಿಸಿದ್ದಾರೆ.ಜಿಲ್ಲೆಯ ಮಳೆ ಪರಿಸ್ಥಿತಿಯ ಬಗ್ಗೆ ರವಿವಾರ ತನ್ನ ಅಧೀನ ಅಧಿಕಾರಿಗಳೊಂದಿಗೆ ಆನ್‌ಲೈನ್ ಸಭೆ ನಡೆಸಿ ಅವರು ಮಾತನಾಡಿದರು.ರಾಷ್ಟ್ರೀಯ ವಿಪತ್ತು ದಳದ ಒಂದು ತಂಡವು ಆಗಮಿಸಿದೆ. ಅದನ್ನು ಪುತ್ತೂರಿನಲ್ಲಿಡಲಾಗುವುದು. ರಾಜ್ಯ ವಿಪತ್ತು ದಳದ ಎರಡು ತಂಡವು ಆಗಮಿಸಿದ್ದು, ಮಂಗಳೂರು ಹಾಗೂ ಸುಬ್ರಹ್ಮಣ್ಯದಲ್ಲಿ ಇಡಲಾಗುವುದು. ಈ ದಳಗಳು ಎಲ್ಲ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಎನ್.ಡಿ.ಆರ್.ಎಫ್ ತಂಡ ಆಗಮನ Read More »

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ನಾಲ್ವರಿಗೆ ಗಾಯ

ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಇಂದು ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಚಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ಬೃಹತ್ ಮರ ಮುರಿದು ಬಿದ್ದಿದೆ. ಘಟನೆಯಿಂದ ಕಾರಿನಲ್ಲಿದ್ದ ಚಾಲಕ, ಇಬ್ಬರು ಮಹಿಳೆಯವರು, ಒಂದು ಮಗು ಕಾರಿನಲ್ಲಿ ಸಿಲುಕಿಕೊಂಡಿದ್ದು ಸ್ಥಳೀಯರು ಕಾರ್ಯಾಚರಣೆ ನಡೆಸಿ ಸಿಲುಕಿದ್ದ ಗಾಯಾಳುಗಳನ್ನು ಹೊರ ತೆಗೆದು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ನಾಲ್ವರಿಗೆ ಗಾಯ Read More »

ಭಾರೀ ಗಾಳಿ ಮಳೆಗೆ ಕಾರ್ಮಿಕ ಮಹಿಳೆಯ ಮೇಲೆ ಮರ ಬಿದ್ದು ಮಹಿಳೆ ಸಾವು

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡುದಿನಗಳಿಂದ ಭಾರೀ ಗಾಳಿ ಮಳೆಯಾಗುತ್ತಿದ್ದು, ಕಾರ್ಮಿಕ ಮಹಿಳೆಯ ಮೇಲೆ ಮರ ಬಿದ್ದು ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿ ನಡೆದಿದೆ.ಲೈನ್ ಮನೆಯಲ್ಲಿ ವಾಸವಿದ್ದ ಮಹಿಳೆ ಗೌರಿ (52) ಎಂಬವರೇ ಮೃತ ದುರ್ದೈವಿ. ಮನೆಯಿಂದ ಹೊರ ಬಂದಾಗ ಮರ ಬಿದ್ದಿದ್ದು, ಮರದಡಿ ಸಿಲುಕಿಕೊಂಡು ಗೌರಿ ಮೃತಪಟ್ಟರು, ಮನೆಗೂ ಹಾನಿಯಾಗಿದೆ.

ಭಾರೀ ಗಾಳಿ ಮಳೆಗೆ ಕಾರ್ಮಿಕ ಮಹಿಳೆಯ ಮೇಲೆ ಮರ ಬಿದ್ದು ಮಹಿಳೆ ಸಾವು Read More »

error: Content is protected !!
Scroll to Top