Author name: Tejas

ದೇವರಿಗೆ ವಾಮಚಾರ ಮಾಡಿದ ಕಿಡಿಗೇಡಿಗಳು

ತುಮಕೂರು: ಮನುಷ್ಯರಿಗೆ ವಾಮಚಾರ ಮಾಡುವ ಸುದ್ದಿಗಳು ಆಗಾಗ ವರದಿಯಾಗುತ್ತಿರುತ್ತವೆ.ಆದರೆ ದೇವರಿಗೆ ವಾಮಾಚಾರ ಮಾಡಿದಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಟ್ನಾ ಗ್ರಾಮದಲ್ಲಿ ಮಾ. 11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ.ಹಟ್ನಾ ಗ್ರಾಮ ಸೇರಿದಂತೆ 32 ಗ್ರಾಮಗಳ ಗ್ರಾಮ ದೇವತೆ ಕೆಂಪಮ್ಮ ದೇವಿಗೆ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಇಂದು (ಮಾ. 12ರ ಬುಧವಾರ) ಮುಂಜಾನೆ ಪೂಜೆ ಸಲ್ಲಿಸಲು ದೇವಸ್ಥಾನದಕ್ಕೆ ಅರ್ಚಕರು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.ವಾಮಾಚಾರಕ್ಕೆ […]

ದೇವರಿಗೆ ವಾಮಚಾರ ಮಾಡಿದ ಕಿಡಿಗೇಡಿಗಳು Read More »

ತೋಟಕ್ಕೆ ಕಾಡಾನೆ ದಾಳಿಯಿಂದ ಅಪಾರ ನಷ್ಟ

ಸುಳ್ಯ ತಾಲೂಕಿನ ಐನೆಕಿದು ಗ್ರಾಮದ ಬಾಣೂರು ಕಟ್ಟೆಮನೆ ಜಯಂತ ಗೌಡರ ತೋಟಕ್ಕೆ ಕಳೆದ ತಡ ರಾತ್ರಿ ಆನೆ ದಾಳಿ ಮಾಡಿ ಅಪಾರ ಪ್ರಮಾಣದ ಕ್ರಷಿಗೆ ಹಾನಿ ಮಾಡಿವೆ.ತೆಂಗು, ಅಡಿಕೆ ಮತ್ತು ಬಾಳೆ ಗಿಡಗಳನ್ನು ಮುರಿದು ಹಾಕಿದೆ. ಈ ಪ್ರದೇಶದಲ್ಲಿ ಇನ್ನೂ ಕೆಲವು ಕಡೆಗಳಲ್ಲಿ ಹಾನಿ ಮಾಡಿರುವುದಾಗಿ ತಿಳಿದು ಬಂದಿದೆ.ಕಳೆದ ಕೆಲವು ಸಮಯಗಳಿಂದ ನಿರಂತರವಾಗಿ ಕಾಡಾನೆಗಳು ತೋಟಗಳಿಗೆ ದಾಳಿ ಮಾಡಿ ರೈತರಿಗೆ ನಷ್ಟ ಉಂಟು ಮಾಡುತ್ತಿವೆ.ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ.

ತೋಟಕ್ಕೆ ಕಾಡಾನೆ ದಾಳಿಯಿಂದ ಅಪಾರ ನಷ್ಟ Read More »

ದ.ಕ ದಲ್ಲಿ ಹೆಚ್ಚಿದ ಉರಿ ಬಿಸಿಲು,ಸುಳ್ಯದಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ ಉಷ್ಣಾಂಶ ದಾಖಲು!

ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಲಾಗಿದೆ.ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನ ಮುಂದುವರಿ ಯುವ ಮುನ್ಸೂಚನೆ ಇದೆ. ಇದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಅಲೆ)ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಪ್ರತಿಯೊಬ್ಬರೂ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್

ದ.ಕ ದಲ್ಲಿ ಹೆಚ್ಚಿದ ಉರಿ ಬಿಸಿಲು,ಸುಳ್ಯದಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ ಉಷ್ಣಾಂಶ ದಾಖಲು! Read More »

ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಎರಡು ದಿನಗಳ ಸರ್ಪಸಂಸ್ಕಾರ ಸೇವೆಯಲ್ಲಿ ಪಾಲ್ಗೊಗೊಳ್ಳುವರು.ದಕ್ಷಿಣ ಭಾರತದ ಸುಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅನೇಕ ಬಾಲಿವುಡ್, ಹಾಲಿವುಡ್ ನಟ ನಟಿಯರು ಆಗಮಿಸುತ್ತಿದ್ದು, ಸಂತಾನ ಭಾಗ್ಯವಿಲ್ಲದವರು, ಚರ್ಮರೋಗ ವ್ಯಾಧಿ, ಆರೋಗ್ಯ ವೃದ್ಧಿಗಾಗಿ ಸೇವೆಯನ್ನು ಸಲ್ಲಿಸುವಂಥದ್ದು ಸರ್ವೇಸಾಮಾನ್ಯವಾಗಿದೆ.ಅದೇ ರೀತಿ ಕತ್ರಿನಾ ಕೈಫ್ ಅವರು ಕೂಡ ಕುಕ್ಕೆ ಸುಬ್ರಹ್ಮಣ್ಯನ ಸೇವೆಯನ್ನು ಸಲ್ಲಿಸುವುದಕ್ಕೋಸ್ಕರ ಎರಡು ದಿನಗಳ ಸರ್ಪ ಸಂಸ್ಕಾರ ಸೇವೆಯಲ್ಲಿ ಪಾಲ್ಗೊಳ್ಳಲಿರುವರು ಎಂದು ಹೇಳಲಾಗಿದೆ.ಮಾ.11 ರಂದು ಆರಂಭವಾದ ಸರ್ಪ

ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ Read More »

ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಊರವರು

ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ಬುಧವಾರ ವರದಿಯಾಗಿದೆ.ಕನಕಮಜಲು ಗ್ರಾಮದ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ ಮಗನಿಗೆ ಕೇಳಿ ಅವರು ತಕ್ಷಣ ಅವರು ಮನೆಯವರಿಗೆ ಹಾಗೂ ಕನಕಮಜಲಿನ ಸ್ಥಳೀಯರಿಗೆ ಈ ವಿಷಯ ತಿಳಿದರುಅಂಗಡಿಯೆದುರು ಜನ ಸೇರಿ ಅಂಗಡಿಯ ಎದುರುನಿಂತಿದ್ದ ಹಾಗೂ ಅಂಗಡಿಯೊಳಗೆ ಕಳವು ನಡೆಸುತ್ತಿದ್ದ ಕಳ್ಳನನ್ನು ಹಿಡಿದುಕೊಂಡರು.ವಿಚಾರಿಸಿದಾಗಬಂಟ್ವಾಳದ

ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಊರವರು Read More »

ಬೆಳ್ಳಾರೆ : ಮಹಿಳಾ ಸಬಲೀಕರಣದತ್ತ ನಮ್ಮ ಚಿತ್ತ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ

ಗ್ರಾಮ ಪಂಚಾಯತು ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಧನಲಕ್ಷ್ಮೀ ಸ್ತ್ರೀಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಬೆಳ್ಳಾರೆ, ಸೆಲ್ಕೋ ಸೋಲಾರ್ ಲೈಟ್ಸ್ ಪ್ರೈ.ಲಿ. ಬೆಂಗಳೂರು ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿಮಹಿಳಾ ಸಬಲೀಕರಣದತ್ತ ನಮ್ಮ ಚಿತ್ತ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮವು ಮಾ.11 ರಂದು ಬೆಳ್ಳಾರೆ ರಾಜೀವ್ ಗಾಂಧಿ

ಬೆಳ್ಳಾರೆ : ಮಹಿಳಾ ಸಬಲೀಕರಣದತ್ತ ನಮ್ಮ ಚಿತ್ತ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ Read More »

ಕುಸಿದು ಬಿದ್ದು ಅರಣ್ಯ ವೀಕ್ಷಕ ಸಾವು

ಕರ್ತವ್ಯ ನಿರತರಾಗಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಅರಣ್ಯ ವೀಕ್ಷಕ ಸಾವನ್ನಪ್ಪಿರುವ ಘಟನೆ ಮಾರ್ಚ್ 11 ರಂದು ಗುರುವಾಯನಕೆರೆಯಲ್ಲಿ ನಡೆದಿದೆ. ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಗಫೂ‌ರ್ (59) ಮೃತ ವ್ಯಕ್ತಿ.ಮೃತ ಗಫೂ‌ರ್ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.

ಕುಸಿದು ಬಿದ್ದು ಅರಣ್ಯ ವೀಕ್ಷಕ ಸಾವು Read More »

ಕುಮಾರಧಾರ ನದಿಯಲ್ಲಿ ರಿಕ್ಷಾ ಚಾಲಕನ ಶವ ಪತ್ತೆ

ಉಪ್ಪಿನಂಗಡಿ ಕುಮಾರಧಾರ ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಮಾ.11 ರಂದು ನಡೆದಿದೆ.ಕಡಬ ತಾಲೂಕಿನ ಗೋಳಿತೊಟ್ಟು ನಿವಾಸಿ ರವಿಚಂದ್ರ ಅವರ ಪುತ್ರ ಗಗನ್ ಮೃತ ಯುವಕ ಎಂದು ಗುರುತಿಸಲಾಗಿದೆ.ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಗಗನ್ ನಿನ್ನೆ ಬಾಡಿಗೆ ಎಂದು ಮನೆಯಿಂದ ಹೋಗಿದ್ದು, ಇಂದು ಮೃತದೇಹ ಉಪ್ಪಿನಂಗಡಿ ನದಿಯಲ್ಲಿ ಪತ್ತೆಯಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕುಮಾರಧಾರ ನದಿಯಲ್ಲಿ ರಿಕ್ಷಾ ಚಾಲಕನ ಶವ ಪತ್ತೆ Read More »

ಚಂಡಮಾರುತ ಹಿನ್ನಲೆ ನಾಳೆಯಿಂದ ಮಳೆ ಆರಂಭ

ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದೇಶದ ಇನ್ನು ಕೆಲವು ರಾಜ್ಯಗಳಲ್ಲಿ ಮಾ.12ರಿಂದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರ್ನಾಟಕದಾದ್ಯಂತ ಬಿಸಿಲಿನ ಧಗೆ ಹೆಚ್ಚಾಗಿದ್ದು, ಎಲ್ಲೆಡೆ ಬಿಸಿಲು ರಾರಾಜಿಸುತ್ತಿದೆ. ಈ ಮಧ್ಯೆ ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಹಿಂದೂ ಮಹಾಸಾಗರದಲ್ಲಿ ಉಂಟಾಗಿದ್ದ ವೈಪರಿತ್ಯ ಕೊನೆಗೊಂಡಿದೆ. ಇದೀಗ ತಮಿಳುನಾಡು ಕರಾವಳಿ ಸಮೀಪ ಸಮುದ್ರಮಟ್ಟಕ್ಕಿಂತ 0.9 ಕಿಲೋ ಮೀಟರ್ ಎತ್ತರದಲ್ಲಿ ಚಂಡಮಾರುತದ ಗಾಳಿ ಬೀಸುತ್ತಿದೆ. ಇದು ಪೂರ್ವ ಮುಂಗಾರು ಮಳೆ ಆರಂಭದ ಮುನ್ಸೂಚನೆ ಎಂದು ಹವಾಮಾನ

ಚಂಡಮಾರುತ ಹಿನ್ನಲೆ ನಾಳೆಯಿಂದ ಮಳೆ ಆರಂಭ Read More »

ಸುಳ್ಯ ಲ್ಯಾಂಪ್ಸ್ ಸೊಸೈಟಿ ನಾಮನಿರ್ದೇಶಿತ ಸದಸ್ಯರಾಗಿ ಭವಾನಿಶಂಕ‌ರ್ ಕಲ್ಮಡ್ಕ ನೇಮಕ

ಸುಳ್ಯ ಲ್ಯಾಂಪ್ಸ್ ಸೊಸೈಟಿ ನಾಮನಿರ್ದೇಶಿತ ಸದಸ್ಯರಾಗಿ ಭವಾನಿಶಂಕ‌ರ್ ಕಲ್ಮಡ್ಕ ನೇಮಕಗೊಂಡಿದ್ದಾರೆ.ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರ ಮೇರೆಗೆ ಸುಳ್ಯ ತಾಲ್ಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ಸಂಘ ನಿ., (ಲ್ಯಾಂಪ್ಸ್) ಸುಳ್ಯ, ಇದರ ಆಡಳಿತ ಮಂಡಳಿಗೆ ಭವಾನಿಶಂಕ‌ರ್ ಕಲ್ಮಡ್ಕ ಇವರನ್ನು ಸರಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಿ ಆದೇಶಮಾಡಲಾಗಿದೆ. ವಿಧಾನ ಸಭಾ ಅಧ್ಯಕ್ಷರಾದ ಯು ಟಿ ಖಾದರ್ ರವರ

ಸುಳ್ಯ ಲ್ಯಾಂಪ್ಸ್ ಸೊಸೈಟಿ ನಾಮನಿರ್ದೇಶಿತ ಸದಸ್ಯರಾಗಿ ಭವಾನಿಶಂಕ‌ರ್ ಕಲ್ಮಡ್ಕ ನೇಮಕ Read More »

error: Content is protected !!
Scroll to Top