Author name: Tejas

ಅಪರೂಪದ ಶಾಸನಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದ್ದು, ಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ ಕುಕ್ಕೆಸುಬ್ರಹ್ಮಣ್ಯದ ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ಜಿ.ವಿ. ಕಲ್ಲಾಪುರ ಅವರು ಈ ಅಪರೂಪದ ಶಾಸನ ಅಧ್ಯಯನ ಮಾಡಿದ್ದಾರೆ.ಸ್ವಸ್ತಿಶ್ರೀ ಎಂಬ ಶುಭ ಸೂಕ್ತದಿಂದ ಪ್ರಾರಂಭವಾಗುವ ಈ ಶಾಸನವನ್ನು ಶಾಲಿವಾಹನ ಶಕವರ್ಷ 1801ರ […]

ಅಪರೂಪದ ಶಾಸನಗಳು ಪತ್ತೆ Read More »

ಅರಂತೋಡು : ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಅರಂತೋಡು ಗ್ರಾಮದ ಅಂಗಡಿಮಜಲು ಮತ್ತು ಕುಲ್ಟಾರು ಎಂಬಲ್ಲಿ ಕಿಂಡಿ ಆಣೆಕಟ್ಟು ನಿರ್ಮಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಶಿವ ಪ್ರಸನ್ನ ಫೆ. 28 ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಳೆದ ಹಲವಾರು ವರ್ಷಗಳಿಂದ ಬೇಸಿಗೆ ಸಮಯದಲ್ಲಿ ಅರಂತೋಡಿನ ಬಲ್ನಾಡು ಹೊಳೆಯಲ್ಲಿ ನೀರಿನ ಹರಿವು ನಿಂತು ಹೋಗುತಿತ್ತು.ಹೊಳೆಯ ನೀರನ್ನು ಅವಲಂಬಿಸಿ ಕೃಷಿ ಮಾಡುವ ಕೃಷಿಕರು ನೀರಿಲ್ಲದೆ ಬಾರಿ ಸಂಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನಲೆ ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್

ಅರಂತೋಡು : ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ Read More »

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರರ ಕಾರು ಭೀಕರ ಅಪಘಾತ

ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡು ಅವರು ಅಪಾಯಿಂದ ಪಾರಾದ ಘಟನೆ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ವಿಜೇಂದ್ರ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚಿಕ್ಕಮಗಳೂರಿನಿಂದ ಶಿಖಾರಿಪುರಕ್ಕೆ ತೆರಳುವ ಸಮಯದಲ್ಲಿ ಅಪಘಾತ ಸಂಭವಿಸಿದೆ.ಕಾರಿನ ಹಿಂಭಾಗಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ.ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಡ್ರೈವ‌ರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಖೆ ಆರಂಭಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರರ ಕಾರು ಭೀಕರ ಅಪಘಾತ Read More »

ಸವಣೂರು ಸೀತಾರಾಮ ರೈಯವರು ಮಾಸ್ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಶಾಸಕಿ ಭಾಗೀರಥಿ

ಸುಳ್ಯದಲ್ಲಿ ಅಡಿಕೆ ಸಂಸ್ಕರಣಾ ಘಟಕವನ್ನು ಸ್ಥಾಪಿಸಿರುವುದು ನನಗೆ ಕುಶಿಯಾಗಿದೆ.ಇದು ನಮ್ಮ ಸೌಭಾಗ್ಯ. ಸೀತಾರಾಮ ರೈಯವರ ಈ ಯೋಜನೆ ರೈತರಿಗೆ ಶಕ್ತಿತುಂಬುವ ಜೊತೆಗೆ ಒಂದಷ್ಟು ಜನರಿಗೆ ಉದ್ಯೋಗ ಲಭಿಸಿದೆ. ಈ ಭಾಗದಲ್ಲಿ ಎಳೆಚುಕ್ಕಿ ರೋಗ ರೈತರನ್ನು ಕಂಗಾಲಾಗಿಸಿದೆ. ಇದಕ್ಕೆ ಶಾಶ್ವತ ಪರಿಹಾರವಾಗಬೇಕಿದೆ. ಸುಳ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಬೇಕೆಂಬ ಕನಸು ಇದೆ. ಇದರಿಂದ ನಮ್ಮವರಿಗೆ ಅಷ್ಟು ಜನರಿಗೆ ಉದ್ಯೋಗ ದೊರೆಯಬಹುದು .ಇದಕ್ಕೆನಿಮ್ಮೆಲ್ಲರ ಸಹಕಾರ ಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರುಫೆ. 28ರಂದು ಸುಳ್ಯದ ಎಪಿಎಂಸಿ ರೈತ ಸಮುದಾಯ ಭವನದಲ್ಲಿ

ಸವಣೂರು ಸೀತಾರಾಮ ರೈಯವರು ಮಾಸ್ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಶಾಸಕಿ ಭಾಗೀರಥಿ Read More »

ಅರೆಭಾಷೆ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ,ಅರೆಭಾಷೆ ಸೇರಿದಂತೆ ಸಣ್ಣ ಸಣ್ಣ ಭಾಷೆ ಉಳಿಸಿ ಬೆಳೆಸಿ: ಸದಾನಂದಗೌಡ

ಕೊಡಗು ಜಿಲ್ಲೆಯಲ್ಲಿ ಕೊಡವ, ಅರೆಭಾಷಿಕರು ಸೇರಿದಂತೆ ಹಲವು ಸಣ್ಣ ಸಣ್ಣ ಭಾಷಿಕ ಸಮಾಜದವರು ಬದುಕಿನ ಬಂಡಿ ಸಾಗಿಸುತ್ತಿದ್ದು, ಎಲ್ಲಾ ಸಣ್ಣ ಸಣ್ಣ ಭಾಷಿಕರೂ ಕೊಡಗಿನ ಇತಿಹಾಸ ತಿಳಿದು, ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಕರೆ ನೀಡಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ ಶುಕ್ರವಾರ ನಡೆದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ

ಅರೆಭಾಷೆ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ,ಅರೆಭಾಷೆ ಸೇರಿದಂತೆ ಸಣ್ಣ ಸಣ್ಣ ಭಾಷೆ ಉಳಿಸಿ ಬೆಳೆಸಿ: ಸದಾನಂದಗೌಡ Read More »

ಅರಂತೋಡು : ಮಾ.8ರಿಂದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸವ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸ ಮಾ.8ರಿಂದ ಆರಂಭವಾಗಲಿದೆ.ಈ ದಿನ ಮಧ್ಯಾಹ್ನ 3 ಗಂಟೆಗೆ ಮಂತ್ರವಾದಿ ಗುಳಿಗ ನೇಮ ಮತ್ತು ರಾತ್ರಿ 10 ಗಂಟೆಗೆ ಮೊಗೇರ್ಕಳ ದೈವಗಳ ಹಾಗೂ ತನ್ನಿಮಾನಿಗ ದೈವದ ನೇಮೋತ್ಸವ ನಡೆಯಲಿದೆ.ಮಾ.9ರಂದು ಆದಿತ್ಯವಾರ ಬೆಳಿಗ್ಗೆ 8 ಗಂಟೆಗೆ ಸಾರ್ಲಪಟ್ಟ ದೈವ ಕೊರಗಜ್ಜನ ನೇಮೋತ್ಸವ ನಡೆಯಲಿರುವುದು.ಸರ್ವ ಭಕ್ತರು ಆಗಮಿಸಿ ದೈವಗಳ ದರ್ಶನ ಪಡೆದು ಪ್ರಸಾದ ಸ್ವೀಕರಿಸಬೇಕೆಂದು ದೈವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.

ಅರಂತೋಡು : ಮಾ.8ರಿಂದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸವ Read More »

ಸ್ಕೂಟರ್ ಗೆ ಕಾಡು ಹಂದಿ‌ ಗುದ್ದಿ ಸ್ಕೂಟರ್ ಸವಾರ ಆಸ್ಪತ್ರೆಗೆ ದಾಖಲು

ಸುಳ್ಯ ತಾಲೂಕಿನ ಗ್ರಾಮದ ಮೇನಾಲದಲ್ಲಿ ಸ್ಕೂಟಿ ಚಲಾಯಿಸಿಕೊಂಡು ತೆರಳುತ್ತಿದ್ದ ಯುವಕನಿಗೆ ಕಾಡು ಹಂದಿ ಅಡ್ಡಬಂದು ಸ್ಕೂಟಿ ಪಲ್ಟಿಯಾಗಿ ಯುವಕ ಗಾಯಗೊಂಡ ಘಟನೆ ಗುರುವಾರ ವರದಿಯಾಗಿದೆ.ಮೇನಾಲದಲ್ಲಿ ಫಾಸ್ಟ್ ಫುಡ್ ನಡೆಸುತ್ತಿರುವ ಭಾಸ್ಕರರವರು ಫೆ.27ರಂದು ರಾತ್ರಿ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ರಬ್ಬರ್ ಕೂಪ್ ಒಳಗಿನಿಂದ ದೊಡ್ಡ ಗಾತ್ರದ ಹಂದಿಯೊಂದು ರಸ್ತೆಗೆ ಬಂತೆಂದೂ ಅದೇ ಸಮಯಕ್ಕೆ ಸ್ಕೂಟಿಯೂ ಬಂದು ಹಂದಿ ಗುದ್ದಿತೆನ್ನಲಾಗಿದೆ.ಪರಿಣಾಮ ಭಾಸ್ಕರರಿಗೆ ಕೈ ಗೆ ಗಾಯವಾಗಿದೆ. ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆದಿದ್ದಾರೆ.

ಸ್ಕೂಟರ್ ಗೆ ಕಾಡು ಹಂದಿ‌ ಗುದ್ದಿ ಸ್ಕೂಟರ್ ಸವಾರ ಆಸ್ಪತ್ರೆಗೆ ದಾಖಲು Read More »

ಐದು ಕಾರುಗಳ ನಡುವೆ ಸರಣಿ ಅಪಘಾತ

ಚಲಿಸುತ್ತಿದ್ದ ಬಸ್ ನಿಂದ ಬಿದ್ದ ಮೊಬೈಲ್‌ ಪರಿಣಾಮ ಐದು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ ಘಟನೆ ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿಯಲ್ಲಿ ನಡೆದಿದೆ.ಬಿ.ಸಿ.ರೋಡು ಕೈಕಂಬ ಚಾವಡಿಗುತ್ತು ಮನೆ ನಿವಾಸಿ ಅನಿತಾ ಮರಿಯ ಲೋಬೊ ಅವರು ಫೆ.25ರಂದು ಕಾರಿನಲ್ಲಿ ಫರಂಗಿಪೇಟೆ ಕಡೆಯಿಂದ ಕೈಕಂಬಕ್ಕೆ ಆಗಮಿಸುತ್ತಿದ್ದಾಗ ತಲಪಾಡಿಯಲ್ಲಿ ಮುಂದೆ ಸಾಗುತ್ತಿದ್ದ ಬಸ್ಸಿನಿಂದ ಪ್ರಯಾಣಿಕರೊಬ್ಬರ ಮೊಬೈಲ್‌ ಅವರ ಕಾರಿನ ಬೋನೆಟ್ ಮೇಲೆ ಬಿದ್ದಿದೆ. ಈ ವೇಳೆ ಅವರು ದಿಢೀ‌ರ್ ಬ್ರೇಕ್ ಹಾಕಿದ್ದು, ಆ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ನಾಲ್ಕು ಕಾರುಗಳು ಪರಸ್ಪರ

ಐದು ಕಾರುಗಳ ನಡುವೆ ಸರಣಿ ಅಪಘಾತ Read More »

ಅರಂಬೂರು ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಸುಳ್ಯ ;ಅರಂಬೂರಿನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವೆಂಕಟ್ ( 50) ಮೃತ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ತಕ್ಷಣ ಇವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆಂದು ಎನ್ನಲಾಗಿದೆ.

ಅರಂಬೂರು ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಅಪಚಿತ ವ್ಯಕ್ತಿಯ ಶವ ಪತ್ತೆ

ಅಡಿಕೆ ತೋಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಪುತ್ತೂರಿನ ಪಾಂಗಳಾಯ ಎಂಬಲ್ಲಿಂದ ಫೆ.26ರಂದು ವರದಿಯಾಗಿದೆ.ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು ಅಡಿಕೆಯ ಮರವೊಂದು ಅರ್ಧದಲ್ಲೆ ತುಂಡಾಗಿ ಶವದ ಸಮೀಪ ಪತ್ತೆಯಾಗಿದೆ. ಅಡಿಕೆ ಕದಿಯಲು ಬಂದು ಅಡಿಕೆ ಮರದಿಂದ ಬಿದ್ದು ಸತ್ತಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.!

ಅಪಚಿತ ವ್ಯಕ್ತಿಯ ಶವ ಪತ್ತೆ Read More »

error: Content is protected !!
Scroll to Top